ನೃತ್ಯ ಮಾಡುತ್ತಾ ಹೃದಯಾಘಾತದಿಂದ ಕುಸಿದು ಬಿದ್ದು ಪ್ರಾಣ ಬಿಟ್ಟ ಯುವಕ

Views: 0
ಗುಜರಾತ್: 19 ವರ್ಷದ ಯುವಕನೊಬ್ಬ ಗರ್ಬಾ ಡ್ಯಾನ್ಸ್ ಮಾಡುತ್ತಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಗುಜರಾತ್ ರಾಜ್ಯದ ಜಾಮ್ ನಗರದಲ್ಲಿ ಬೆಳಕಿಗೆ ಬಂದಿದೆ.
ವಿನೀತ್ ಮೆಹುಲ್‌ಭಾಯ್(19) ಮೃತ ಬಾಲಕ. ಗುಜರಾತ್‌ನ ಜಾಮ್‌ನಗರದ ನಿವಾಸಿಯಾಗಿರುವ ವಿನೀತ್ ಮೆಹುಲ್‌ಭಾಯ್ ಕುನ್ವಾರಿಯಾ ಗಾರ್ಬಾ ನೃತ್ಯ ಅಭ್ಯಾಸ ಮಾಡುವಾಗ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು.
ಜುನಾಗಢ ನಿವಾಸಿಗಳು ಕಳೆದ 10 ವರ್ಷಗಳಿಂದ ನವರಾತ್ರಿಯ ಸಂದರ್ಭದಲ್ಲಿ ಗರ್ಬಾ ಸ್ಪರ್ಧೆಗಳಲ್ಲಿ ವಿಜೇತರಾಗಿದ್ದಾರೆ. ಈ ವರ್ಷವೂ ಸ್ಪರ್ಧೆಯಲ್ಲಿ ಗೆಲ್ಲುವ ತಯಾರಿಯಲ್ಲಿದ್ದಾಗ ಯುವಕ ಏಕಾಏಕಿ ಕುಸಿದು ಬಿದ್ದಿದ್ದಾನೆ. ಮೃತರ ಕುಟುಂಬಸ್ಥರಿಗೆ ಮಾಹಿತಿ ನೀಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗರ್ಬಾ ಡ್ಯಾನ್ಸ್ ಮಾಡುವಾಗ ವಿನೀತ್ ಕೆಳಗೆ ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಹೇಳಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಯೂ ಬಂದಿತ್ತು. ಹೃದಯಾಘಾತದಿಂದ ವಿನೀತ್ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.