ರಾಜಕೀಯ
ಪಕ್ಷ ವಿರೋಧಿ ಚಟುವಟಿಕೆ ವಿರುದ್ಧ ಹೇಳಿಕೆ ನೀಡಿದ್ದ ಬಸವನ ಗೌಡ ಪಾಟೀಲ್ ಯತ್ನಾಳ್, ರೇಣುಕಾಚಾರ್ಯ ಅವರಿಗೆ ಬಿಜೆಪಿ ನೋಟಿಸ್

Views: 0
ಬಿಜೆಪಿ ನಾಯಕರು ಬಹಿರಂಗವಾಗಿ ಪಕ್ಷಕ್ಕೆ ಧಕ್ಕೆ ತರುವಂತಹ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ಮಾಜಿ ಶಾಸಕ ರೇಣುಕಾಚಾರ್ಯ ಸೇರಿದಂತೆ ಹಲವರಿಗೆ ಬಹಿರಂಗ ಹೇಳಿಕೆ ನೀಡದಂತೆ ನೋಟಿಸ್ ಜಾರಿ ಮಾಡಲಾಯಿತು.
ಬಿಜೆಪಿ ರಾಜ್ಯ ವಿಧಾನಸಭಾ ಚುನಾವಣೆ ಸೋಲಿನ ನಂತರ ರಾಜ್ಯಾಧ್ಯಕ್ಷರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂಬ ಅಗ್ರಹಕ್ಕೆ ರೇಣುಕಾಚಾರ್ಯ ಹೇಳಿಕೆ ಕುರಿತು ಅವರಿಗೆ ನೋಟಿಸ್ ನೀಡಲಾಯಿತು. ನಾನಾ ಸಭೆಯಲ್ಲಿ ಪಕ್ಷದ ಸೋಲಿಗೆ ಬಿಜೆಪಿ ನಾಯಕರನ್ನು ಗುರಿ ಮಾಡಿ ಬಹಿರಂಗವಾಗಿ ಹೇಳಿಕೆ ನೀಡಿದ ಬಸವನಗೌಡ ಯತ್ನಾಳ್ ಪಾಟೀಲ್ ಅವರಿಗೂ ನೋಟಿಸ್ ನೀಡಲಾಗಿದೆ.