ಇತರೆ

ಪತಿ ತನ್ನ ಹೆಂಡತಿಯ ಶೀಲ ಶಂಕಿಸಿ ಕೊಲೆ ಮಾಡಿ ಪರಾರಿ

Views: 0

ಪತ್ನಿಯ ಶೀಲ ಶಂಕಿಸಿ ತನ್ನ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನಲ್ಲಿ ಸಂಕನಹಳ್ಳಿ ಬಳಿಯ ಅರಣ್ಯದಲ್ಲಿ ನಡೆದಿದೆ.

ಆಲನಗೌಡನಹಳ್ಳಿ ಮೂಲದ ಅಂಬಿಕ (28) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ.

ಪತ್ನಿ ಅಂಬಿಕಾ ಅವರು ಹಾಸನದಲ್ಲಿ ಫ್ಯಾಕ್ಟರಿ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಆಕೆಯ ಶೀಲದ ಬಗ್ಗೆ ಪತಿ ಶಂಕೆ ವ್ಯಕ್ತಪಡಿಸಿ,ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಕೊಲೆ ಮಾಡಿದ ಪತಿ ಪರಾರಿಯಾಗಿದ್ದಾನೆ .

ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button