ಪದವಿ ಪೂರ್ವ ಕಾಲೇಜುಗಳ ದೈಹಿಕ ಶಿಕ್ಷಣ ಉಪನ್ಯಾಸಕರಿಗೆ ಪುನಶ್ಚೇತನ ಕಾರ್ಯಗಾರ ಹಾಗೂ ನಿವೃತ್ತರಿಗೆ ಸನ್ಮಾನ
"ಆರೋಗ್ಯವೇ ಭಾಗ್ಯ" ನೆಲೆಯಲ್ಲಿ ದೈಹಿಕ ಶಿಕ್ಷಣದ ಪಾತ್ರ ಅತೀ ಮುಖ್ಯ -- ಜಿಲ್ಲಾ ಪಿಯು ಉಪನಿರ್ದೇಶಕ ಶ್ರೀ ಮಾರುತಿ

Views: 63
ಉಡುಪಿ:ಪದವಿ ಪೂರ್ವ ಕಾಲೇಜುಗಳ ದೈಹಿಕ ಶಿಕ್ಷಣ ಉಪನ್ಯಾಸಕರಿಗೆ ಪುನಶ್ಚೇತನ ಕಾರ್ಯಗಾರ ಹಾಗೂ ನಿವೃತ್ತ ದೈಹಿಕ ಶಿಕ್ಷಣ ಉಪನ್ಯಾಸಕರಿಗೆ ಸನ್ಮಾನ ಸಮಾರಂಭವು ಎಂ ಜಿ ಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಿತು.
ಉದ್ಘಾಟನೆ: ಕಾರ್ಯಕ್ರಮವನ್ನು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಮಾರುತಿ ಯವರು ಉದ್ಘಾಟಿಸಿ, ಮಾತನಾಡಿ “ಆರೋಗ್ಯವೇ ಭಾಗ್ಯ ಆ ನೆಲೆಯಲ್ಲಿ ದೈಹಿಕ ಶಿಕ್ಷಣದ ಪಾತ್ರ ಅತೀ ಮುಖ್ಯ” ಎಂದು ಹೇಳಿದರು.
ಅಜೆಕಾರು ಪದ್ಮ ಗೋಪಾಲ್ ಎಜುಕೇಷನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ . ಸುಧಾಕರ ಶೆಟ್ಟಿ ಯವರು ಅಭಿನಂದನಾ ಭಾಷಣ ಮಾಡಿ, ದೈಹಿಕ ಶಿಕ್ಷಣ ಉಪನ್ಯಾಸಕರೂ ನಿವೃತ್ತಿ ಹೊಂದಿದರು ಅವರು ದೈಹಿಕವಾಗಿ ಸದೃಢವಾಗಿದ್ದಾರೆ. ಅದಕ್ಕೆ ಮುಖ್ಯ ಕಾರಣ ಅವರ ವೃತ್ತಿ ಎಂದರು. ಶಾಲಾ ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಕ್ಕೆ ಹೆಚ್ಚಿನ ಒತ್ತು ಕೊಡಬೇಕು ಅದರ ಮೂಲಕ ಸಾಮಾಜಿಕ ಸ್ವಸ್ಥ ಕಾಪಾಡುವುದಕ್ಕೆ ಸಾದ್ಯವಾಗುತ್ತದೆ ಎಂದು ಹೇಳಿದರು.
ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಸತೀಶ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳು: ನಿವೃತ್ತ ದೈಹಿಕ ಶಿಕ್ಷಣ ಉಪನ್ಯಾಸಕ ಎಸ್ ಶ್ರೀಧರ ಶೆಟ್ಟಿ , ಎಂ ಜಿ ಎಂ ಪದವಿ ಕಾಲೇಜಿನ ಪ್ರಾಂಶುಪಾಲರಾದ ಲಕ್ಷ್ಮೀನಾರಾಯಣ ಕಾರಂತ , ಪದವಿಪೂರ್ವ ಕಾಲೇಜಿನ ಕ್ರೀಡಾ ಸಂಯೋಜಕ ದಿನೇಶ ಕುಮಾರ ಎ , ಉಪಸ್ಥಿತರಿದ್ದರು.
ಸನ್ಮಾನ : ನಿವೃತ್ತ ದೈಹಿಕ ಶಿಕ್ಷಣ ಉಪನ್ಯಾಸಕರಾದ ಬಿ ವಸಂತ ಶೆಟ್ಟಿ ವಿವೇಕ ಪದವಿಪೂರ್ವ ಕಾಲೇಜು ಕೋಟ , ನಾಗರಾಜ ಶೆಟ್ಟಿ ಎಸ್ ವಿ ಪದವಿಪೂರ್ವ ಕಾಲೇಜು ಗಂಗೊಳ್ಳಿ , ಚಂದ್ರಶೇಕರ ಶೆಟ್ಟಿ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜು ಅದಮಾರು ಸನ್ಮಾನ ಸ್ವೀಕರಿಸಿದ್ದರು.
ತರಬೇತಿ: ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಮಂಜುನಾಥ ಜೋಗಿ ಯವರು ಹ್ಯಾಂಡ್ ಬಾಲ್ ಕ್ರೀಡೆಯ ಬಗ್ಗೆ ತರಬೇತಿ ನೀಡಿದರು.
ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಕಾರ್ಯದರ್ಶಿ ಸುಕೇಶ ಶೆಟ್ಟಿ ಹೊಸಮಠ ಸ್ವಾಗತಿಸಿದ್ದರು ಭಂಡಾರ್ಕಾರ್ಸ್ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶಂಕರನಾರಾಯಣ ವಂದಿಸಿದರು ಸಂಘದ ಗೌರವಾಧ್ಯಕ್ಷ ಜೀವನ ಕುಮಾರ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಎಂ ಜಿ ಎಂ ಕಾಲೇಜಿನ ಉಪನ್ಯಾಸಕ ಸುಚಿತ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.