ಇತರೆ

ಪಶು ಇಲಾಖೆಯಲ್ಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ 

Views: 17

ಬೆಂಗಳೂರು: 120 ಪಶು ವೈದ್ಯಾಧಿಕಾರಿಗಳ ಹುದ್ದೆಗಳ ಭರ್ತಿಗೆ ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ ಅಧಿಸೂಚನೆ ಹೊರಡಿಸಿದೆ. ಗುತ್ತಿಗೆ ಆಧಾರದ ಮೇಲೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಕಳೆದ ಜೂನ್ನಲ್ಲಿ 400 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿತ್ತು. ಇದರಲ್ಲಿ 120 ಹುದ್ದೆಗಳು ಭರ್ತಿಯಾಗದೇ ಬಾಕಿ ಉಳಿದ ಹಿನ್ನೆಲೆಯಲ್ಲಿ ಮರು ಅಧಿಸೂಚನೆ ಹೊರಡಿಸಲಾಗಿದೆ.

ವಿದ್ಯಾರ್ಹತೆ: ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯ ಅಥವಾ ಕೃಷಿ ವಿಶ್ವವಿದ್ಯಾಲಯದಿಂದ ಬಿವಿಎಸ್ಸಿ, ಬಿವಿಎಸ್ಸಿ ಆ್ಯಂಡ್ ಎಹೆಚ್ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಕನಿಷ್ಠ 18, ಗರಿಷ್ಠ 35 ವರ್ಷ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗೆ ಅಭ್ಯರ್ಥಿಗಳು ಡಿಸೆಂಬರ್ 12ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್ 25 ಕೊನೆಯ ದಿನ. ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ahvs.karnataka.gov.in ಇಲ್ಲಿಗೆ ಭೇಟಿ ನೀಡಿ.

Related Articles

Back to top button
error: Content is protected !!