ಇತರೆ
ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ: ಮತದಾನದ ವೇಳೆ ಹಿಂಸಾಚಾರ 9 ಮಂದಿ ಸಾವು

Views: 0
ಪಶ್ಚಿಮ ಬಂಗಾಳ ಮೂರು ಹಂತದ ಚುನಾವಣೆಗೆ ಮತದಾನ ನಡೆಸಿದ್ದು ಈ ವೇಳೆ ಹಿಂಸಾಚಾರ ಬುಗಿಲೆದ್ದು ಟಿಎಂಸಿ ಕಾರ್ಯಕರ್ತ ಸೇರಿ 9 ಮಂದಿ ಸಾವನ್ನಪ್ಪಿದ್ದಾರೆ.
ಮತದಾನ ಆರಂಭಕ್ಕೆ ಕೆಲವೇ ಗಂಟೆಗಳು ಮೊದಲು ಮುರ್ಸಿದ ಬಾದ್ ನಲ್ಲಿ ತಡರಾತ್ರಿ ಟಿಎಂಸಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ ಆರಂಭವಾಗಿ ಮನೆಯೊಂದನ್ನು ದ್ವಂಸ ಮಾಡಿದ್ದಾರೆ.
ಬಿಗ್ಬಾಸ್ ಮತ ಪೆಟ್ಟಿಗೆ ಪ್ರವೇಶಿಸಲು ಪ್ರಯತ್ನಿಸಿದಾಗ ಅವರನ್ನು ಬೆಂಬಲಿಗರು ತಡೆದಿದ್ದಾರೆ. ನಂತರ ಪರಿಸ್ಥಿತಿ ಉಲ್ಬಣಗೊಳ್ಳುತ್ತಿದ್ದಂತೆ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.
ಘಟನೆ ವಿರೋಧಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದರು. ಮತ ಕಟ್ಟೆಗಳ ಬಳಿ ಹಿಂಸಾಚಾರ ಭುಗಿಲೆದ್ದ ಹಿನ್ನೆಲೆಯಲ್ಲಿ ಹಲವೆಡೆ ಮತದಾನ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.