ರಾಜಕೀಯ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಗಂಭೀರ ಗಾಯ

Views: 356
ಕೋಲ್ಕತ್ತಾ, :-ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತೀವ್ರ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಅಭಿಮಾನಿಗಳಲ್ಲಿ ಆತಂಕ ಹೆಚ್ಚುವಂತೆ ಮಾಡಿದೆ.
ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಲ್ಕತ್ತಾದ ಸರ್ಕಾರಿ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತ ಹೇಗಾಯಿತು ಎನ್ನುವ ವಿವರ ಇನ್ನಷ್ಟೇ ಗೊತ್ತಾಗಬೇಕಾಗಿದೆ.
ಮೂಲಗಳ ಪ್ರಕಾರ ಮನೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.ಹಣೆಯ ಮಧ್ಯೆಭಾಗದಲ್ಲಿ ರಕ್ತ ದಾರಾಕಾರವಾಗಿ ಸೋರುತ್ತಿದ್ದು ಇದು ಆತಂಕ ಹೆಚ್ಚಿಸಿದೆ
ಮಮತಾ ಬ್ಯಾನರ್ಜಿ ಅವರಿಗೆ ಹಣೆಗೆ ಗಾಯವಾಗಿದ್ದು ರಕ್ತ ಸುರಿಯುತ್ತಿದೆ. ಪಕ್ಷದ ಕಾರ್ಯಕರ್ತರಲ್ಲಿ ಆತಂಕ ಹೆಚ್ಚಾಗಿದೆ. ಆಸ್ಪತ್ರೆಯಲ್ಲಿ ನುರಿತ ವೈದ್ಯರ ತಂಡ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ.
ಪ್ರಾರ್ಥನೆಗೆ ಮನವಿ:
ಈ ಕುರಿತು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಈ ವಿಷಯ ಪ್ರಕಟಿಸಿದ್ದು ಆರೋಗ್ಯಕ್ಕಾಗಿ ಪ್ರಾರ್ಥಿಸಿ ಎಂದು ಮನವಿ ಮಾಡಿರುವುದು ಆತಂಕ ಹಚ್ಚುವಂತೆ ಮಾಡಿದೆ.