ಕೃಷಿ

ಪಹಣಿಗೆ ಆಧಾರ್‌ಲಿಂಕ್ ಕಡ್ಡಾಯ, ಎರಡು ದಿನಗಳಲ್ಲಿ ಲಿಂಕ್ ಮಾಡಿಸಿಕೊಳ್ಳಲು ಗಡುವು

Views: 109

ಕನ್ನಡ ಕರಾವಳಿ ಸುದ್ದಿ: ರೈತರು ತಮ್ಮ ಜಮೀನಿನ ಪಹಣಿಯನ್ನು ಆಧಾರ್‌ಗೆ ಲಿಂಕ್ ಮಾಡುವ ಕಾರ್ಯವು ಪ್ರಗತಿಯಲ್ಲಿದ್ದು ಜಿಲ್ಲೆಯಲ್ಲಿ ಈವರೆಗೆ ಶೇ. 85ರಷ್ಟು ಪ್ರಗತಿಯಾಗಿದೆ.ಬಾಕಿ ಇರುವ ಭೂ ಮಾಲಕರು ತತ್‌ಕ್ಷಣವೇ ಪಹಣಿಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಲು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯ ಒದಗಿಸಲು, ಅಕ್ರಮ ಖಾತಾ ಬದಲಾವಣೆ ತಡೆಗಟ್ಟಲು ಆಧಾರ್ ಜೋಡಣೆಯು ಅವಶ್ಯವಾಗಿದ್ದು, ಜಿಲ್ಲೆಯ ರೈತರು 2 ದಿನದೊಳಗಾಗಿ ಪಹಣಿ ಆಧಾರ್ ದಾಖಲಾತಿಗಳೊಂದಿಗೆ ಹಾಗೂ ಆಧಾರ್ ಜೋಡಣೆಯಾಗಿರುವ ಮೊಬೈಲ್ ನೊಂದಿಗೆ ಗ್ರಾಮ ಆಡಳಿತ ಅಧಿಕಾರಿಯನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬಹುದಾಗಿದೆ.

ಜಿಲ್ಲೆಯಲ್ಲಿ ಜಮೀನು ಹೊಂದಿ ಬೇರೆ ರಾಜ್ಯ ಹಾಗೂ ವಿದೇಶದಲ್ಲಿ ವಾಸವಿದ್ದ ಭೂಮಾಲಕರು ಸ್ವಗ್ರಾಮಕ್ಕೆ ಬಂದ ಕೂಡಲೇ ಅಥವಾ ಅವರ ಕುಟುಂಬಸ್ಥರು/ಸಂಬಂಧಿಕರು ಜಿಲ್ಲೆಯಲ್ಲಿದ್ದಲ್ಲಿ ಕೂಡಲೇ ಪಹಣಿಗೆ ಆಧಾ‌ರ್ ಜೋಡಣೆ ಮಾಡಿಸಬೇಕು. ಈ ಕಾರ್ಯವು ಗ್ರಾಮ ಆಡಳಿತ ಅಧಿಕಾರಿಗಳ ಮುಖಾಂತರವೇ ಆಗುತ್ತಿದ್ದು ಸೈಬರ್, ಗ್ರಾಮ ಒನ್ ಸೆಂಟರ್ ಇತ್ಯಾದಿ ಕಡೆಗಳಲ್ಲಿ ಮಾಡಲು ಅವಕಾಶ ಇರುವುದಿಲ್ಲ. ಆದ್ದರಿಂದ, ಈವರೆಗೆ ಆಧಾರ್ ಜೋಡಣೆ ಮಾಡದೇ ಇರುವ ಭೂ ಮಾಲಕರು ಮುಂದಿನ ದಿನಗಳಲ್ಲಿ ಸರಕಾರದ ಸವಲತ್ತುಗಳಿಂದ ವಂಚಿತರಾಗುವ ಸಂಭವ ಇರುವುದರಿಂದ ಬಾಕಿ ಇರುವ ಭೂ ಮಾಲಕರು ತತ್‌ಕ್ಷಣವೇ ಪಹಣಿಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಲು ಜಿಲ್ಲಾಡಳಿತ ತಿಳಿಸಿದೆ.

Related Articles

Back to top button