ಜನಮನ

ಪಾಕ್ ಕದನವಿರಾಮ ಉಲ್ಲಂಘನೆ:ಭಾರತೀಯ ಸೇನಾಪಡೆ ಕಟ್ಟೆಚ್ಚರ

Views: 105

ಕನ್ನಡ ಕರಾವಳಿ ಸುದ್ದಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷಕ್ಕೆ ವಿರಾಮ ಘೋಷಣೆಯ ನಂತರವೂ ಕಾಶ್ಮೀರದಲ್ಲಿ ಸ್ಫೋಟದ ಶಬ್ದ ಕೇಳಿಬಂದಿದೆ. ದಾಳಿ ಪ್ರಕರಣ ವರದಿಯಾಗುತ್ತಿದ್ದಂತೆ ಭಾರತೀಯ ಸೇನಾಪಡೆ ಕಟ್ಟೆಚ್ಚರ ವಹಿಸಿದೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ವಿಷಯ ಹಂಚಿಕೊಂಡಿರುವ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ‘ಉಭಯ ರಾಷ್ಟ್ರಗಳು ಕದನ ವಿರಾಮ ಘೋಷಿಸಿದ ನಂತರವೂ ಸ್ಫೋಟದ ಶಬ್ದ ಕೇಳಿಸುತ್ತಿದೆ’ ಎಂದು ತಿಳಿಸಿದ್ದಾರೆ.

ಶನಿವಾರ ಸಂಜೆಯ ವೇಳೆಗೆ ಭಾರತ ಮತ್ತು ಪಾಕಿಸ್ತಾನದ ನಡುವೆ ಕದನವಿರಾಮ ಘೋಷಣೆಯಾಗಿತ್ತು. ಆದರೆ, ಪಾಕಿಸ್ತಾನವು ರಾತ್ರಿಯೇ ಜಮ್ಮುವಿನಲ್ಲಿ ಡೋನ್ ದಾಳಿ ನಡೆಸಿದೆ. ಇದರಿಂದ ರಾಜಸ್ಥಾನ, ಪಂಜಾಬ್‌, ಛತ್ತೀಸ್ಸಢದ ಗಡಿಯಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಸಂಪೂರ್ಣ ಬ್ಲಾಕ್‌ಔಟ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.

 

Related Articles

Back to top button