ಶಿಕ್ಷಣ
ಪಾಠ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಶಿಕ್ಷಕ ಸಾವು

Views: 134
ಕನ್ನಡ ಕರಾವಳಿ ಸುದ್ದಿ: ಶಾಲೆಯಲ್ಲಿ ಪಾಠ ಮಾಡುತ್ತಿರುವಾಗ ಶಿಕ್ಷಕರೊಬ್ಬರು ಹೃದಯಘಾತದಿಂದ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಅವರನ್ನು ಶಾಲೆಯಿಂದ ಆಸ್ಪತ್ರೆಗೆ ಕರೆದೊಯ್ಯುವ ಮುನ್ನವೇ ಮೃತಪಟ್ಟಿದ್ದಾರೆ. ದಾವಣಗೆರೆ ಜಿಲ್ಲೆಯ ಮಾಯಕೊಂಡದ ಸರಕಾರಿ ಕೆಪಿಎಸ್ ಪ್ರೌಢಶಾಲೆಯ ಶಿಕ್ಷಕ ನಾಗರಾಜು (46) ಪಾಠ ಮಾಡುವಾಗ ತೀವ್ರ ಸ್ವರೂಪದ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಸಹೋದ್ಯೋಗಳು ಅವರನ್ನು ಆಸ್ಪತ್ರೆಗೆ ಕರೆದೊಯ್ದುರಾದರೂ ಅದಾಗಲೇ ಮೃತಪಟ್ಟಿದ್ದರು.ಮೃತರು ಪತ್ನಿ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಶಿಕ್ಷಕ ನಾಗರಾಜು ನಿಧನಕ್ಕೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸಂತಾಪ ಸೂಚಿಸಿದ್ದಾರೆ.