ಯುವಜನ

ಪಿಜಿ ಕಟ್ಟಡದ 7ನೇ ಮಹಡಿಯಿಂದ ಜಿಗಿದು ಯುವತಿ ಸಾವು, ಯುವಕನಿಗೆ ಗಂಭೀರ ಗಾಯ

Views: 114

ಕನ್ನಡ ಕರಾವಳಿ ಸುದ್ದಿ: ಪಿಜಿ ಕಟ್ಟಡದ 7ನೇ ಮಹಡಿಯಿಂದ ಜಿಗಿದು ಯುವತಿ ಸಾವನ್ನಪ್ಪಿ, ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವೈಟ್‌ಫೀಲ್ಡ್ ವ್ಯಾಪ್ತಿಯ ಇಸಿಸಿ ರಸ್ತೆಯಲ್ಲಿ ನಡೆದಿದೆ.

ಮೃತಪಟ್ಟ ಯುವತಿಯನ್ನು ಪಾಂಡಿಚೇರಿಯ ಉಲೈವೈಕ್ಕಲ್ ಮೂಲದ ಜನನಿ (23) ಎಂದು ಗುರುತಿಸಲಾಗಿದ್ದು, ಆಕೆಯ ಜೊತೆಗೆ ಜಿಗಿದಿದ್ದ ಪಾಂಡಿಚೇರಿಯ ನಲ್ಲತ್ತೂರು ಮೂಲದ ಮಾಣಿಕ್ ವೇಲು (30) ಗಂಭೀರವಾಗಿ ಗಾಯಗೊಂಡಿದ್ದಾನೆ.

ಘಟನಾ ಸ್ಥಳಕ್ಕೆ ವೈಟ್‌ಫೀಲ್ಡ್ ಠಾಣೆ ಪೊಲೀಸರು ಭೇಟಿ ನೀಡಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಮೃತ ಜನನಿ ಪಟ್ಟಂದೂರು ಅಗ್ರಹಾರದಲ್ಲಿರುವ ಸೊಸೈಟಿ ಜನರಲ್ ಕಂಪನಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದು, ಕಳೆದ ಜನವರಿಯಿಂದ ಇಸಿಸಿ ರಸ್ತೆಯ ಮೌಂಟೇನ್ ಪಿಜಿಯಲ್ಲಿ ವಾಸಿಸುತ್ತಿದ್ದರು. ಮಾಣಿಕ್ ವೇಲು ಪಾಂಡಿಚೇರಿಯ ಲಾಜಿಸ್ಟಿಕ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇಸಿಸಿ ರಸ್ತೆಯ ಡೀನ್ಸ್ ಶಾಲೆಯ ಮುಂಭಾಗದಲ್ಲಿರುವ ರಾಧಾಕೃಷ್ಣ ಕೋ-ಲಿವಿಂಗ್ ಪಿಜಿಗೆ ಬಂದಿದ್ದ ಇಬ್ಬರೂ 7ನೇ ಮಹಡಿಯಿಂದ ಜಿಗಿದಿದ್ದಾರೆ.

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿರುವ ಮಾಣಿಕ್ ವೇಲುರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ವೈಟ್‌ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರೆಸಲಾಗಿದೆ ಎಂದು ಡಿಸಿಪಿ ಸೈದುಲು ಅಡಾವತ್ ತಿಳಿಸಿದ್ದಾರೆ.

Related Articles

Back to top button
error: Content is protected !!