ಯುವಜನ
ಪುತ್ತೂರು:ಕಾಲೇಜಿನ ವಿದ್ಯಾರ್ಥಿಯೊಬ್ಬ ವಿದ್ಯಾರ್ಥಿನಿಗೆ ಬ್ಲೇಡಿನಿಂದ ಹಲ್ಲೆ

Views: 87
ಪುತ್ತೂರು: ಕೊಂಬೆಟ್ಟು ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಯೊಬ್ಬ ವಿದ್ಯಾರ್ಥಿನಿಯ ಮೇಲೆ ಬ್ಲೇಡಿನಿಂದ ಹಲ್ಲೆ ಮಾಡಿರುವ ಘಟನೆ ಇಂದು ಮಧ್ಯಾಹ್ನ ನಡೆಯಿತು. ಗಾಯಗೊಂಡ ವಿದ್ಯಾರ್ಥಿನಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಪುತ್ತೂರು ಪೊಲೀಸರು ಭೇಟಿ ನೀಡಿ, ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ.
ವಿದ್ಯಾರ್ಥಿನಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಹಲ್ಲೆಗೈದ ವಿದ್ಯಾರ್ಥಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.