ಆರ್ಥಿಕ
ಪೆಟ್ರೋಲ್, ಡೀಸೆಲ್ ದರ 5-10 ರೂ. ಇಳಿಕೆ ?

Views: 74
ಹೊಸದಿಲ್ಲಿ: ಮುಂದಿನ ತಿಂಗಳು ತೈಲ ಕಂಪೆನಿಗಳು ಪ್ರತೀ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು 5ರಿಂದ 10 ರೂ.ವರೆಗೆ ತಗ್ಗಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ತಗ್ಗಿದ್ದ ಹಿನ್ನೆಲೆಯಲ್ಲಿ 2023-24 ಹಣಕಾಸು ವರ್ಷದ ಮೂರನೇ ತ್ತೈಮಾಸಿಕದಲ್ಲಿ ತೈಲ ಕಂಪನಿಗಳು 75,000 ಕೋಟಿ ರೂ. ನಿವ್ವಳ ಲಾಭ ಗಳಿಸಿವೆ.
2023-24 ಹಣಕಾಸು ವರ್ಷದ ಮೊದಲ ಆರು ತಿಂಗಳಲ್ಲಿ ಭಾರತದ ಮೂರು ತೈಲ ಕಂಪನಿಗಳ ನಿವ್ವಳ ಲಾಭ 57,091.87 ಕೋಟಿ ರೂ. ಆಗಿದೆ. 2022-23 ಹಣಕಾಸು ವರ್ಷದ ಇದೇ ಅವಧಿಯಲ್ಲಿ ನಿವ್ವಳ ಲಾಭ 1,137.89 ಕೋಟಿ ರೂ. ಆಗಿತ್ತು. ಲಾಭ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ದರ 5ರಿಂದ 10 ರೂ.ವರೆಗೆ ಇಳಿಕೆಯಾಗುವ ಸಾಧ್ಯತೆಯಿದೆ. ಈ ಕ್ರಮವು ಹಣದುಬ್ಬರ ತಗ್ಗಿಸುವ ಜತೆಗೆ ಮುಂಬರುವ ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರುವ ನಿರೀಕ್ಷೆ ಇದೆ.