ಜನಮನ
ಪೆಟ್ರೋಲ್ ಬೆಲೆ ಶೀಘ್ರವೇ 50 ರೂ.ಗೆ ಇಳಿಯಲಿದೆ..!

Views: 209
ರಾಜ್ಯದಲ್ಲಿ 13,458 ಕೋಟಿ ರೂ. ವೆಚ್ಚದ 18 ಹೆದ್ದಾರಿ ಯೋಜನೆಗಳಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ 50 ರೂ.ಗೆ ಒಂದು ಲೀಟರ್ ಪೆಟ್ರೋಲ್ ಸಿಗಲಿದೆ ಎಂದರು.
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ರಾಜ್ಯದಲ್ಲಿ 13,458 ಕೋಟಿ ರೂ. ವೆಚ್ಚದ 18 ಹೆದ್ದಾರಿ ಯೋಜನೆಗಳಿಗೆ ಚಾಲನೆ ದೊರೆತಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಬೆಳಗಾವಿ ಮತ್ತು ಶಿವಮೊಗ್ಗದಲ್ಲಿ ನಡೆದ ಎರಡು ಕಾರ್ಯಕ್ರಮಗಳ ಮೂಲಕ ಹೆದ್ದಾರಿ ಕ್ರಾಂತಿಗೆ ಅಡಿಗಲ್ಲಿಟ್ಟರು. ಇದೇ ವೇಳೆ ಎಲೆಕ್ಟ್ರಾನಿಕ್ ವಾಹನಗಳ ಬಳಕೆ ಹೆಚ್ಚಾಗುತ್ತಿದ್ದಂತೆಯೇ ಮುಂದಿನ ದಿನಗಳಲ್ಲಿ ಪೆಟ್ರೋಲ್ ಬೆಲೆ 50 ರೂ.ಗಳಿಗೆ ಇಳಿಯಲಿದೆ ಎಂದರು