ಜನಮನ

ಪೊಲೀಸ್ ಅಧಿಕಾರಿ ಮೇಲೆ ಕೈಎತ್ತಿ ರೇಗಿದ್ದ ಸಿಎಂ: ವ್ಯಾಪಕ ವಿರೋಧ, ಕರೆ ಮಾಡಿ ಸಮಾಧಾನ ಹೇಳಿದ ಸಿದ್ದರಾಮಯ್ಯ

Views: 27

ಕನ್ನಡ ಕರಾವಳಿ ಸುದ್ದಿ: ಸಿಎಂ ಪೋಲಿಸ್ ಅಧಿಕಾರಿ ಮೇಲೆ ಕೈ ಎತ್ತಿ ರೇಗಿದ್ದ ಹಿನ್ನಲೆ ವ್ಯಾಪಕ ವಿರೋಧ ವ್ಯಕ್ತವಾದ್ದರಿಂದ ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಎಎಸ್ಪಿ ಎನ್.ವಿ.ಬರಮನಿ ಅವರಿಗೆ ಸಿಎಂ ಸಿದ್ದರಾಮಯ್ಯ ದೂರವಾಣಿ ಕರೆ ಮಾಡಿ ಸಮಾಧಾನಪಡಿಸಿದ್ದಾರೆ.

ಏ.28ರಂದು ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರೋಧಿಸಿ ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್‌ ಸಮಾವೇಶದಲ್ಲಿ ಭದ್ರತಾ ವ್ಯವಸ್ಥೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನಗೊಂಡು, ವೇದಿಕೆಯಲ್ಲೇ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಬರಮನಿ ಅವರಿಗೆ ಕೈ ಎತ್ತಿ ರೇಗಿದ್ದರು. ಈ ಹಿನ್ನೆಲೆಯಲ್ಲಿ ನೊಂದಿದ್ದ ಭರಮನಿ ಸ್ವಯಂ ನಿವೃತ್ತಿ ಕೋರಿ ಗೃಹ ಇಲಾಖೆಗೆ ಮನವಿ ಸಲ್ಲಿಸಿದ್ದರು.

ಸಿಎಂ ಸಿದ್ದರಾಮಯ್ಯ ಇದೀಗ ಭರಮನಿ ಅವರಿಗೆ ದೂರವಾಣಿ ಕರೆ ಮಾಡಿ ಸಮಾಧಾನಪಡಿಸಿದ್ದಾರೆ.‌ “ಸ್ವಯಂನಿವೃತ್ತಿ ನಿರ್ಧಾರ ಬೇಡ. ಅದನ್ನು ವಾಪಸ್ ಪಡೆಯಿರಿ. ನಾನು ಅಂದು ಉದ್ದೇಶಪೂರ್ವಕವಾಗಿ ಆ ರೀತಿ ಮಾಡಿಲ್ಲ. ನಿಮಗೆ ಅಗೌರವ ತೋರಬೇಕು ಎಂದು ಮಾಡಿದ್ದಲ್ಲ. ಅಪಮಾನ ಮಾಡುವ ಉದ್ದೇಶ ನನಗಿರಲಿಲ್ಲ” ಎಂದು ಮನವರಿಕೆ ಮಾಡಿದ್ದಾರೆ.ನೋವಾಗಿದ್ದರೆ ಕ್ಷಮಿಸಿ ಎಂದು ಸಿಎಂ ಹೇಳಿದ್ದಾರೆ.

ಅಂದು ಕಾಂಗ್ರೆಸ್ ನಡೆಸಿದ ಕಾರ್ಯಕ್ರಮಕ್ಕೆ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದ್ದರು. ಹಾಗಾಗಿ ಕೋಪ ಬಂದು ಮಾತನಾಡಿದ್ದೇನೆ. ಯಾವುದೇ ಬೇಸರ ಮಾಡಿಕೊಳ್ಳಬೇಡಿ. ರಾಜೀನಾಮೆ ವಾಪಸ್ ಪಡೆದುಕೊಳ್ಳಿ. ನೋವಾಗಿದ್ದರೆ ಕ್ಷಮಿಸಿ ಎಂದು ಸಮಾಧಾನಪಡಿಸಿದ್ದಾರೆ” ಎಂದು ತಿಳಿದು ಬಂದಿದೆ.

ಎಂದಿನಂತೆ ಕರ್ತವ್ಯಕ್ಕೆ ಹಾಜರಾದ ಎಎಸ್ಪಿ ಭರಮನಿ

ಎಎಸ್ಪಿ ಭರಮನಿ ಇಂದು ಕರ್ತವ್ಯಕ್ಕೆ ಹಾಜರಾದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿರುವ ಅವರ ಕಚೇರಿಗೆ ಆಗಮಿಸಿ ಎಂದಿನಂತೆ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾರೆ.

 

Related Articles

Back to top button