ಪೌಷ್ಟಿಕಾಂಶ ಆಹಾರವೇ ಬದುಕಿನ ಆಹಾರ- ಡಾ. ಜಿ ಹೆಚ್ ಪ್ರಭಾಕರ ಶೆಟ್ಟಿ

Views: 68
ಕನ್ನಡ ಕರಾವಳಿ ಸುದ್ದಿ: ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಕೋಟೇಶ್ವರ ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಮಾರ್ಗದರ್ಶನದಲ್ಲಿ ಕಾಲೇಜಿನ ವಿಜ್ಞಾನ ಕ್ಲಬ್ ಮತ್ತು ಇಕೋ ಕ್ಲಬ್‌ನ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ “ನಾವೇನನ್ನ ತಿನ್ನುತ್ತಿದ್ದೇವೆ” ಎಂಬ ಶಿರ್ಷಿಕೆ ಅಡಿಯಲ್ಲಿ ಆಹಾರ ಮತ್ತು ಅರಿವು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಭಂಡಾರ್‌ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಕುಂದಾಪುರ ಇಲ್ಲಿನ ನಿವೃತ್ತ ಪ್ರಾಧ್ಯಾಪಕರಾದ ಡಾ. ಜಿ ಹೆಚ್ ಪ್ರಭಾಕರ ಶೆಟ್ಟಿ ಭಾಗವಹಿಸಿ ಈ ಮಾತುಗಳನ್ನಾಡಿದರು.
ನಾವೆಲ್ಲರೂ ತಿನ್ನುತ್ತಿರುವ ಆಹಾರದ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಎಷ್ಟು, ಏನು, ಯಾವಾಗ, ಮತ್ತು ಯಾವುದನ್ನು ತಿನ್ನಬೇಕು ಎಂಬುವುದು ಬಹಳ ಮುಖ್ಯ ಹಾಗೂ ನಮ್ಮ ಆರೋಗ್ಯದ ಸೂಚ್ಯಂಕಗಳೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದ ಆಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ರವರು ಮಾತಾನಾಡುತ್ತಾ, ಅದರ ಬಯಸುವ ಆಹಾರಕ್ಕಿಂತ ಉದರ ಬಯಸುವ ಆಹಾರವನ್ನು ಹಿತಮಿತವಾಗಿ ಸೇವಿಸಬೇಕು. ಈ ರೀತಿಯ ಆಹಾರ ಕ್ರಮ ಜೀವನ ಕ್ರಮವಾಗಿ ರೂಪುಗೊಳ್ಳಬೇಕು ಎಂದು ಆಶಿಸಿದರು.
ಇಂದಿನ ವೇಗದಿಂದ ಕೂಡಿದ ಬದುಕಿನಲ್ಲಿ “ಫಾಸ್ಟ್ ಫುಡ್” ಗೆ ಒಗ್ಗಿಕೊಂಡರೆ, ಅನಾರೋಗ್ಯದ ಬದುಕನ್ನು ಬದುಕ ಬೇಕಾದೀತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಇಕೋ ಕ್ಲಬ್‌ನ ಸಂಚಾಲಕರಾದ ನಾಗರಾಜ ಯು. ಕಾರ್ಯಕ್ರಮವನ್ನು ಸಂಘಟಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಹಾಯಕ ಪ್ರಾಧ್ಯಾಪಕರುಗಳಾದ ರಂಜಿತ್ ಹಾಗೂ ಅನುಷಾ ಎಲ್. ಉಪಸ್ಥಿತರಿದ್ದರು. ಗಣಕ ವಿಜ್ಞಾನ ಉಪನ್ಯಾಸಕಿ ಅಮಿತಾ ಕೆ.ವಿ. ಸ್ವಾಗತಿಸಿ, ಭೌತಶಾಸ್ತ್ರ ವಿಭಾಗದ ಉಪನ್ಯಾಸಕಿ ಲಲಿತಾ ವಂದಿಸಿದರು. ವೈಷ್ಣವಿ ಮತ್ತು ತಂಡ ಪ್ರಾರ್ಥಿಸಿದರು. ಬಿ.ಎಸ್ಸಿ ವಿದ್ಯಾರ್ಥಿನಿ ಐಶಾ ನಿದಾ ನಿರೂಪಣೆ ಮಾಡಿದರು.