ಪ್ರಜಾಪ್ರಭುತ್ವದ ಕತ್ತು ಹಿಸುಕುವ ಸರ್ಕಾರ: ಯತೀಂದ್ರ ಸಿದ್ದರಾಮಯ್ಯ

Views: 101
ಚಾಮರಾಜನಗರ: ‘ಕೇಂದ್ರ ಗೃಹ ಸಚಿವ ಅಮಿತ್ ಶಾ ಒಬ್ಬ ಗೂಂಡಾ, ರೌಡಿ. ಇಂಥವರನ್ನು ಪ್ರಧಾನಿ ಮೋದಿಯವರು ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆ’ ಎಂದು ಕಾಂಗ್ರೆಸ್ ಮುಖಂಡ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಹನೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಗುಜರಾತ್ ಅವರ ಮೇಲೆ ಕೊಲೆ ಆರೋಪ ಇದೆ. ಅಪರಾಧ ಚಟುವಟಿಕೆಗಳ ಹಿನ್ನಲೆಯನ್ನು ಹೊಂದಿರುವ ಅವರು ಈಗ ದೇಶದ ಉನ್ನತ ಸ್ಥಾನದಲ್ಲಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು
ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿದ್ದರು. ಈಗ ನಿರುದ್ಯೋಗಿಗಳಿಗೆ ಉದ್ಯೋಗ ಸೃಷ್ಟಿ ಮಾಡುವುದು ಕೇಂದ್ರ ಸರ್ಕಾರದ ಹೊಣೆ ಅಲ್ಲ ಎಂದು ಹೇಳುತ್ತಿದ್ದಾರೆ. ಕಪ್ಪು ಹಣ ವಾಪಸ್ ತರುತ್ತೇವೆ ಎಂದು ಹೇಳಿದರು. ತಂದರಾ? ಕನಿಷ್ಠ ಪಕ್ಷ ಸ್ವಿಸ್ ಬ್ಯಾಂಕ್‌ಗಳಲ್ಲಿ ಯಾರದ್ದೆಲ್ಲ ಖಾತೆ ಇದೆ ಎಂಬ ಮಾಹಿತಿಯನ್ನೂ ನೀಡಿಲ್ಲ’ ಎಂದು ಕಿಡಿಕಾರಿದರು. ಬಿಜೆಪಿಯವರು 400ಕ್ಕೂ ಹೆಚ್ಚು ಸ್ಥಾನಗಳು ಬರಲಿವೆ ಎಂದು ಹೇಳುತ್ತಿದ್ದಾರೆ. ಅಷ್ಟು ಸ್ಥಾನಗಳು ಬಂದರೆ ಸಂವಿಧಾನ ಬದಲಾವಣೆ ಮಾಡುವುದೇ ಇವರ ರಹಸ್ಯ ಕಾರ್ಯಸೂಚಿ. ದೇಶದ ಇತಿಹಾಸದಲ್ಲೇ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಸರ್ಕಾರ ಯಾವುದಾದರೂ ಇದ್ದರೆ ಅದು ಮೋದಿ ಸರ್ಕಾರ’ ಎಂದು ಯತೀಂದ್ರ ಟೀಕಿಸಿದರು.