ಇತರೆ
ಪ್ರತಿಭಟನೆಯ ವೇಳೆ ಮಹಿಳಾ ಪೊಲೀಸ್ ಸಿಬ್ಬಂದಿಯ ಸೊಂಟಕ್ಕೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ ವ್ಯಕ್ತಿ ವಶಕ್ಕೆ

Views: 200
ಕನ್ನಡ ಕರಾವಳಿ ಸುದ್ದಿ: ಪ್ರತಿಭಟನೆ ವೇಳೆ ಕಾರ್ಯಕರ್ತನೊಬ್ಬ ಮಹಿಳಾ ಪೊಲೀಸ್ ಅಧಿಕಾರಿಯ ಸೊಂಟಕ್ಕೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಯನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದೆ.
ಪ್ರತಿಭಟನಾನಿರತ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆಯುವ ವೇಳೆ ಮಹಿಳಾ ಪೊಲೀಸ್ ಅಧಿಕಾರಿ ಪ್ರತಿಭಟನಾಕಾರರನ್ನು ಹಿಡಿದು ಕರೆದುಕೊಂಡು ಹೋಗುವಾಗ ಹಿಂದಿನಿಂದ ಕಾರ್ಯಕರ್ತನೊಬ್ಬ ಮಹಿಳಾ ಅಧಿಕಾರಿ ಸೊಂಟಕ್ಕೆ ಕೈ ಹಾಕಿದ್ದಾನೆ.
ಮಹಿಳಾ ಅಧಿಕಾರಿ ಕಾರ್ಯಕರ್ತನ ಕೈಯನ್ನು ತಳ್ಳಿ ದೂರವಾದರೂ ಮತ್ತೆ ಹತ್ತಿರ ಬಂದ ಆ ವ್ಯಕ್ತಿ ಅಸಭ್ಯವಾಗಿ ವರ್ತಿಸಿದ್ದಾನೆ. ಕೊನೆಗೆ ಸಿಟ್ಟಿಗೆದ್ದ ಮಹಿಳಾ ಅಧಿಕಾರಿ ಹಿಡಿದಿದ್ದ ವ್ಯಕ್ತಿಯನ್ನು ಬಿಟ್ಟು ಸೊಂಟಕ್ಕೆ ಕೈ ಹಾಕಿದವನ್ನು ಮೊದಲು ಹಿಡಿದು ಪೊಲೀಸ್ ಜೀಪ್ ಹತ್ತಿಸಿದ್ದಾರೆ.
ಮಹಿಳಾ ಪೊಲೀಸ್ ಅಧಿಕಾರಿ ಜೊತೆ ಅಸಭ್ಯವಾಗಿ ವರ್ತಿಸಿರುವ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಯುವಕನ ವರ್ತನೆಗೆ ಜನರಿಂದ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ.