ಇತರೆ

ಪ್ರೀತಿಗೆ ಒಪ್ಪದ ಹತ್ತನೇ ತರಗತಿ ವಿದ್ಯಾರ್ಥಿನಿಯನ್ನು ಕತ್ತು ಸೀಳಿ ಕೊಲೆ ಮಾಡಿ ತಾನೂ ರೈಲಿಗೆ ತಲೆ ಕೊಟ್ಟ..!

Views: 204

ಹಾಸನದಲ್ಲೊಬ್ಬ  ಪ್ರೇಮಿ ಬಾಲಕಿಯ ಕತ್ತು ಸೀಳಿ ಕೊಲೆ ಮಾಡಿದ ಬಳಿಕ ತಾನೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಮೃತ ಬಾಲಕಿ ಹತ್ತನೇ ತರಗತಿಯ ಭೂಮಿಕಾ(15) ಪಾಪಿಯ ಕೃತ್ಯಕ್ಕೆ ಬಲಿಯಾಗಿದ್ದಾಳೆ. ಬೆಳಗುಂ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿಯಾಗಿರುವ ಭೂಮಿಕ ಸೋಮವಾರ ಸಂಜೆ ಶಾಲೆ ಮುಗಿಸಿ ಮನೆಗೆ ಹೋಗುವಾಗ ಅಡ್ಡಗಟ್ಟಿದ ಪ್ರೇಮಿ ಆಕೆಯ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಕೊಲೆ ನಡೆಸಿದ ಬಳಿಕ ಅರಸೀಕೆರೆ ಸಮೀಪ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಶರತ್ ಎಂಬಾತ ಭೂಮಿಕಳಾನ್ನು ಪ್ರೀತಿಸುವಂತೆ ಪೀಡಿಸಿದ್ದು, ಆತನ ಪ್ರೀತಿಯನ್ನು ಒಪ್ಪಿಲ್ಲ ಅನ್ನೋ ಕಾರಣಕ್ಕೆ ಭೂಮಿಕಾಳ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಅರಸೀಕೆರೆ ಖಾಸಗಿ ಕಾಲೇಜಿನಲ್ಲಿ ಪದವಿ ವ್ಯಾಸಾಂಗ ಮಾಡುತ್ತಿದ್ದ ಶರತ್ ಅರಸೀಕೆರೆಯ ಜಾಡಘಟ್ಟ ಗ್ರಾಮದ ನಿವಾಸಿಯಾಗಿದ್ದ. ಘಟನಾ ಸ್ಥಳಕ್ಕೆ ಹಾಸನ ಎಸ್‌ಪಿ ಮಹಮ್ಮದ್ ಸುಜಿತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Articles

Back to top button