ಯುವಜನ

ಪ್ರೀತಿಯ ಕಿರುಕುಳಕ್ಕೆ ನೊಂದು ಹೈಸ್ಕೂಲ್ ವಿದ್ಯಾರ್ಥಿನಿ ಆತ್ಮಹತ್ಯೆ 

Views: 245

ಕನ್ನಡ ಕರಾವಳಿ ಸುದ್ದಿ: ಪ್ರೀತಿಯ ಕಿರುಕುಳದಿಂದ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ಘಟನೆ ಗದಗ ಗಜೇಂದ್ರಗಡ ಪಟ್ಟಣದ ಬಣಗಾರ ಕಾಲೋನಿಯಲ್ಲಿ ನಡೆದಿದೆ.

ಖುಷಿ(15) ಆತ್ಮಹತ್ಯೆ ಮಾಡಿಕೊಂಡ ಹೈಸ್ಕೂಲ್ ವಿದ್ಯಾರ್ಥಿನಿ

ವಿದ್ಯಾರ್ಥಿಗಳಾದ ಮುತ್ತುರಾಜ್ ಮ್ಯಾಗೇರಿ(18), ಜುನೇದಸಾಬ್ ಕಂದಗಲ್(19) ಈ ಇಬ್ಬರು ಪ್ರೀತಿಗಾಗಿ ಪೀಡಿಸುತ್ತಿದ್ದರು.

ಪ್ರೀತಿಯ ಕಿರುಕುಳದಿಂದ ಮನನೊಂದು ಖುಷಿಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ಕುಟುಂಬಸ್ಥರು ಆರೋಪಿಸಿದ್ದಾರೆ.

ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button