ಇತರೆ

ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೆ ಭೀಕರವಾಗಿ ಕೊಲೆ ಮಾಡಿದ ಪತಿ ಪರಾರಿ 

Views: 77

ಕನ್ನಡ ಕರಾವಳಿ ಸುದ್ದಿ: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೆ ಭೀಕರವಾಗಿ ಕೊಲೆ ಮಾಡಿ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ.

ಚಿಕ್ಕಮಗಳೂರು ತಾಲೂಕಿನ ಕೈಮರಾ ಚೆಕ್ ಪೋಸ್ಟ್ ಬಳಿ ನಡೆದಿದೆ. ಕೀರ್ತಿ (26) ಮೃತ ದುರ್ದೈವಿಯಾಗಿದ್ದು, ಆಕೆಯ ಪತಿ ಅವಿನಾಶ್ (32) ಕೊಲೆಯ ಆರೋಪಿ ಎಂದು ಗುರುತಿಸಲಾಗಿದೆ.

ಕೀರ್ತಿ ಹಾಗೂ ಅವಿನಾಶ್ ಕಳೆದ ನಾಲ್ಕು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಈ ದಂಪತಿಗೆ ಎರಡೂವರೆ ವರ್ಷದ ಹೆಣ್ಣು ಮಗು ಕೂಡ ಇದೆ. ಆದರೆ ಇತ್ತೀಚಿಗೆ ಇಬ್ಬರ ನಡುವೆ ಜಗಳ ಶುರುವಾಗಿದ್ದು, ಆರೋಪಿ ಡಿವೋರ್ಸ್ ಕೊಡುವಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.

ಮೃತ ಕೀರ್ತಿ ಬಟ್ಟೆ ತೊಳೆದುಕೊಂಡು ಬರುತ್ತೇನೆ ಎಂದು ಹೋದಾಗ ಆಕೆಯನ್ನು ಹಿಂಬಾಲಿಸಿಕೊಂಡು ಬಂದ ಆರೋಪಿ ಚಾಕುವಿನಿಂದ ಮನಸೋ ಇಚ್ಚೇ ಚುಚ್ಚಿದ್ದಾನೆ. ರಕ್ತದ ಮಡುವಿನಲ್ಲಿದ್ದ ಕೀರ್ತಿ ರಸ್ತೆಗೆ ಬಂದು ಕೂಗಾಡಿದ್ದು, ಸ್ಥಳೀಯರು ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಕೀರ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.

Related Articles

Back to top button