ಯುವಜನ

ಪ್ರೀತ್ಸೆ.. ಪ್ರೀತ್ಸೆ..ಎಂದು ಪೀಡಿಸುತ್ತಿದ್ದ ಯುವಕ: ಕಾಲೇಜು ಕಟ್ಟಡದ ಮೂರನೇ ಮಹಡಿಯಿಂದ  ಜಿಗಿದು ಆತ್ಮಹತ್ಯೆಗೈದ ವಿದ್ಯಾರ್ಥಿನಿ

Views: 180

ಕನ್ನಡ ಕರಾವಳಿ ಸುದ್ಧಿ: ಕಾಲೇಜು ಕಟ್ಟಡದ ಮೇಲಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಟ್ಟಡ ಮೇಲಿಂದ ಬಿದ್ದು ತೀವ್ರ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತಪಟ್ಟಿದ್ದಾಳೆ. ಚಿತ್ರದುರ್ಗ ನಗರದ ಚಿತ್ರಾ ಡಾನ್ ಬೋಸ್ಕೋ ಕಾಲೇಜಲ್ಲಿ ಪ್ರಥಮ ಬಿಎಸ್ಸಿ ಓದುತ್ತಿದ್ದ ಪ್ರೇಮಾ ಆತ್ಮಹತ್ಯೆ ಮಾಡಿಕೊಂಡವಳು.

ಚಿತ್ರದುರ್ಗದ ಮೆದೆಹಳ್ಳಿ ನಿವಾಸಿ ಆಗಿದ್ದ ಪ್ರೇಮಾ, ಶುಕ್ರವಾರ ಬೆಳಗ್ಗೆ ಕಾಲೇಜಿಗೆ ಬಂದು ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸ್ಥಳಕ್ಕೆ ಬಡಾವಣೆ ಪೊಲೀಸ್ ಠಾಣೆ ಪಿಎಸ್‌ಐ ರಘು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಪ್ರೇಮಾಳಿಗೆ ಯುವಕನೊಬ್ಬ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ತರುಣ್‌ ಎಂಬಾತ ಪ್ರೀತಿ‌ ಮಾಡುವಂತೆ ಪ್ರೇಮಾಳಿಗೆ ಸದಾ ಪೀಡುಸುತ್ತಿದ್ದ ಎನ್ನಲಾಗಿದೆ. ವಾಟ್ಸ್‌ ಆ್ಯಪ್‌ನಲ್ಲಿ ನಿತ್ಯವೂ ಚಾಟಿಂಗ್ ಮಾಡಿ ಕಿರಿಕಿರಿ ಮಾಡುತ್ತಿದ್ದ. ಆತ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ವಿದ್ಯಾರ್ಥಿನಿಯ ಪೋಷಕರು ಆರೋಪಿಸಿದ್ದಾರೆ. ತರುಣ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದರು.

Related Articles

Back to top button