ಇತರೆ

ಫಿಟ್ನೆಸ್ ಸೆಂಟರ್ ರಿಸೆಪ್ಷನಿಸ್ಟ್‌ ಯುವತಿ 3ನೇ ಮಹಡಿಯಿಂದ ಬಿದ್ದು ಅನುಮಾನಾಸ್ಪದ ಸಾವು!

Views: 67

ಕನ್ನಡ ಕರಾವಳಿ ಸುದ್ದಿ: ಮೂರಂತಸ್ತಿನ ಕಟ್ಟಡದಿಂದ ಬಿದ್ದು ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕಡಬಗೆರೆಯಲ್ಲಿ ನಡೆದಿದೆ.

ರಿಸೆಪ್ಷನಿಸ್ಟ್ ರಕ್ಷಿತಾ (20) ಮೃತ ಯುವತಿ. ಈಕೆ ಜುನಿಫರ್ ಫಿಟ್ನೆಸ್ ಸೆಂಟರ್‌ನಲ್ಲಿ ಕಳೆದ 8 ತಿಂಗಳಿನಿಂದ ರಿಸೆಪ್ಷನಿಸ್ಟ್‌ ಆಗಿ ಕೆಲಸ ಮಾಡುತ್ತಿದ್ದಳು.

ಇದ್ದಕ್ಕಿದ್ದಂತೆ ಮೂರನೇ ಮಹಡಿಯಲ್ಲಿದ್ದ ಫಿಟ್ನೆಸ್ ಸೆಂಟರ್‌ ಮೇಲಿನಿಂದ ಬಿದ್ದು ರಕ್ಷಿತಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!