ಇತರೆ

ಫೆಂಗಲ್ ಚಂಡಮಾರುತ:  ಶೀತಗಾಳಿ, ಮಳೆ: ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

Views: 302

ಕನ್ನಡ ಕರಾವಳಿ ಸುದ್ದಿ: ಫೆಂಗಲ್ ಚಂಡಮಾರುತದಿಂದಾಗಿ ಕರ್ನಾಟಕದಲ್ಲಿಯೂ ಮೈಕೊರೆವ ಚಳಿಯೊಂದಿಗೆ ಧಾರಾಕಾರ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿಹಾಗೂ ಚಳಿ ಇರುವುದರಿಂದ ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ .ಈ ರಜಾ ದಿನದ ಕಲಿಕಾ ಪ್ರಕ್ರಿಯೆಗಳನ್ನ ಮುಂದಿನ ಸರ್ಕಾರಿ ರಜೆ ದಿನಗಳಲ್ಲಿ ಸರಿದೂಗಿಸಲಾಗುವುದು ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ. ಎನ್ ರವೀಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತೀವ್ರ ಛಳಿ ಹಿನ್ನಲೆಯಲ್ಲಿ ಇಂದು (2 .12. 2024) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಒಂದು ದಿನ ರಜೆ ಫೋಷಿಸಿ ಜಿಲ್ಲಾಧಿಕಾರಿ ಶಿವಶಂಕರ್ ಆದೇಶಿಸಿದ್ದಾರೆ

ಮೈಸೂರು ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸೂಚನೆ ನೀಡಿರುವ ಹಿನ್ನಲೆಯಲ್ಲಿ (ಡಿಸೆಂಬರ್ 2 ರಂದು) ಸೋಮವಾರ ಇಂದು ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮಿಕಾಂತ ರೆಡ್ಡಿ ಅವರು ಆದೇಶಿಸಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸೂಚನೆ ನೀಡಿರುವ ಹಿನ್ನಲೆಯಲ್ಲಿ ದಿನಾಂಕ 2/12/2024ರ ಸೋಮವಾರ ಇಂದು ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( 2nd ಪಿ.ಯುಸಿ ವರೆಗೆ) ರಜೆ ಘೋಷಣೆ ಮಾಡಲಾಗಿದೆ.

ಈ ರಜೆಯು ಜಿಲ್ಲೆಯ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( ಎರಡನೇ ಪಿಯುಸಿ) ವರೆಗೆ ಅನ್ವಯವಾಗುತ್ತದೆ.

ಈ ರಜಾ ದಿನದ ಕಲಿಕಾ ಪ್ರಕ್ರಿಯೆಯನ್ನು ಮುಂದಿನ ಸರ್ಕಾರಿ ರಜೆ ದಿನಗಳಲ್ಲಿ ಸರಿದೂಗಿಸಲಾಗುವುದು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button