ಧಾರ್ಮಿಕ
ಫೆ.17ಕ್ಕೆ ಮರವಂತೆಯಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Views: 123
ಕುಂದಾಪುರ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್, ಬೈಂದೂರು, ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಮತ್ತು ಪಡುಕೋಣೆ ವಲಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಫೆ.17ನೇ ಶನಿವಾರ ಮರವಂತೆ ಶ್ರೀ ದುರ್ಗಾಯಕ್ಷೇಶ್ವರಿ ದೇವಸ್ಥಾನದ ಆವರಣದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯುವುದು. ಪೂಜಾ ಸಮಿತಿಯ ಅಧ್ಯಕ್ಷ ದಯಾನಂದ ಬಳೆಗಾರ ಅಧ್ಯಕ್ಷತೆ ವಹಿಸಲಿದ್ದು ಯಳಜಿತ ಶ್ರೀ ರಾಮಕೃಷ್ಣ ಆಶ್ರಮದ ಸ್ವಾಮಿ ಸತ್ಯಸ್ವರೂಪಾನಂದ ಅವರು ಧಾರ್ಮಿಕ ಪ್ರವಚನ ನೀಡುವರು. ಶಾಸಕ ಗುರುರಾಜ ಗಂಟಿಹೊಳೆ, ಬಸ್ರೂರು ಅಪ್ಪಣ್ಣ ಹೆಗ್ಡೆ, ಯೋಜನೆಯ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಸೇರಿದಂತೆ ಗಣ್ಯರನೇಕರು ಮುಖ್ಯ ಅತಿಥಿಗಳಾಗಿರುವರು. ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ಇರುತ್ತದೆ ಎಂದು ಸಮಿತಿ ಪ್ರಕಟಿಸಿದೆ.