ಫೆ.25, ವಕ್ವಾಡಿಯಲ್ಲಿ ಬೃಹತ್ ರಕ್ತದಾನ ಶಿಬಿರ ಹಾಗೂ ಗೌರವಾಭಿನಂದನೆ

Views: 165
ಕುಂದಾಪುರ : ವಕ್ವಾಡಿ ಫ್ರೆಂಡ್ಸ್ (ರಿ) ಇವರ ಆಶ್ರಯದಲ್ಲಿ ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ, ರಕ್ತ ನಿಧಿ ವಿಭಾಗ ಕೆಎಂಸಿ ಮಣಿಪಾಲ ಇವರ ಸಹಯೋಗದೊಂದಿಗೆ “ಸ್ಪಂದನ- 2024” ಅಂಗವಾಗಿ ಬೃಹತ್ ರಕ್ತದಾನ ಶಿಬಿರ ಹಾಗೂ ಗೌರವಾಭಿನಂದನೆ ಕಾರ್ಯಕ್ರಮ ಫೆಬ್ರವರಿ 25ರಂದು ಬೆಳಿಗ್ಗೆ 8.30 ರಿಂದ ವಕ್ವಾಡಿ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ.
ರಕ್ತದಾನ ಯಾಕೆ ಮಾಡಬೇಕು?
—ಭಾರತದಲ್ಲಿ ಬಹುಮಟ್ಟಿನ ಜನರು ರಕ್ತದಾನ ಮಾಡಲು ಹೆದರುತ್ತಾರೆ. ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಅಭಿಯಾನಗಳನ್ನು ನಡೆಸಿದೆ. ಆದರೆ ಇಲ್ಲಿವರೆಗೆ ಜೀವವುಳಿಸುವ ರಕ್ತದಾನಕ್ಕೆ ಜನಸಮೂಹ ಮುಕ್ತವಾಗಿ ಬಂದಿಲ್ಲ.
— ರಕ್ತದಾನ ಒಬ್ಬರ ಜೀವ ಉಳಿಸುತ್ತದೆ. ರಕ್ತ ದಾನ ಒಬ್ಬರ ಜೀವವನ್ನು ಉಳಿಸುತ್ತದೆ. ಅದಕ್ಕೆ ಯಾವುದೇ ಪರ್ಯಾಯವಿಲ್ಲ. ಕೇವಲ ಒಂದು ದಾನವು ನಾಲ್ವರ ಜೀವವನ್ನು ಉಳಿಸುತ್ತದೆ.
— ರಕ್ತದಾನದಿಂದ ಹೆಚ್ಚುವರಿ ಕಬ್ಬಿಣಾಂಶ ಹೊರಹೋಗುತ್ತದೆ. ಹೆಚ್ಚವರಿ ಕಬ್ಬಿಣಾಂಶದಿಂದ ಅಧಿಕ ರಕ್ತದ ಒತ್ತಡ ಮುಂತಾದ ಅಡ್ಡ ಪರಿಣಾಮಗಳಿರುತ್ತವೆ. ಇದು ಲಿವರ್, ಹೃದಯ ಮತ್ತು ಪಿತ್ತಜನಕಾಂಗದಲ್ಲಿ ಶೇಖರಣೆಯಾಗಿ ಹೃದಯಬೇನೆ, ರಕ್ತದೊತ್ತಡ ಉಲ್ಬಣವಾಗುತ್ತದೆ.
— ನೀವು ಆರೋಗ್ಯ ತಪಾಸಣೆ ಅವಕಾಶ ಪಡೆಯುತ್ತೀರಿ. ರಕ್ತದಾನ ಕೇಂದ್ರದಲ್ಲಿ ವೈದ್ಯರು ಹೃದಯಬಡಿತ, ರಕ್ತದೊತ್ತಡ, ಕೊಲೆಸ್ಟರಾಲ್, ಹೇಮೋಗ್ಲೋಬಿನ್ ಮಟ್ಟವನ್ನು ಪರೀಕ್ಷೆ ಮಾಡುತ್ತಾರೆ. ರಕ್ತದಾನ ಮಾಡುವ ಮೂಲಕ ನಿಮ್ಮ ಆರೋಗ್ಯದ ಜಾಡು ಹಿಡಿಯಬಹುದು ಮತ್ತು ಆಹಾರ, ವ್ಯಾಯಾಮ, ಜೀವನಶೈಲಿ ಬದಲಾವಣೆ ಮತ್ತಿತರ ಅಂಶಗಳು ಹೇಗೆ ದೇಹದ ಮೇಲೆ ಪರಿಣಾಮ ಬೀರುತ್ತದೆ.
–ರಕ್ತದ ಕ್ಯಾನ್ಸರ್ ಅಪಾಯವನ್ನು ತಗ್ಗಿಸುತ್ತದೆ. ರಕ್ತದಾನ ಮಾಡುವುದರಿಂದ ರಕ್ತಕ್ಯಾನ್ಸರ್ ಅಪಾಯ ತಗ್ಗುತ್ತದೆಂದು ಸಂಶೋಧಕರು ಪತ್ತೆಹಚ್ಚಿದ್ದಾರೆ. ರಕ್ತದಾನ ಮಾಡಿದಾಗ ನಿಮ್ಮ ದೇಹ ಹೊಸ ರಕ್ತ ಪಡೆಯುವ ಅವಕಾಶ ಸಿಗುತ್ತದೆ ಮತ್ತು ರಕ್ತದ ಕ್ಯಾನ್ಸರ್ ಅವಕಾಶ ಕಡಿಮೆಯಾಗುತ್ತದೆ.
—-ರಕ್ತದಾನದಿಂದ ನಿಮಗೇನೂ ನಷ್ಟವಾಗುವುದಿಲ್ಲ. ಆದರೆ ನಿಮ್ಮ ಆರೋಗ್ಯ ಮತ್ತು ಸಮುದಾಯದ ಆರೋಗ್ಯದ ಅನುಕೂಲಗಳು ಬೆಲೆಕಟ್ಟಲಾಗದ್ದು.