ಕರಾವಳಿ

ಬಂಟ್ವಾಳ ಕೊಲೆ ಪ್ರಕರಣ: ಮೇ 30ರ ವರೆಗೆ ನಿಷೇಧಾಜ್ಞೆ ಜಾರಿ 

Views: 342

ಕನ್ನಡ ಕರಾವಳಿ ಸುದ್ದಿ: ಬಂಟ್ವಾಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಘಟಕ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ಕ್ರಮವಾಗಿ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕಿನಾದ್ಯಂತ ಮೇ 27ರ ಸಂಜೆ 6ರಿಂದ ಮೇ 30ರ ಸಂಜೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಪ್ರಭಾರ ಜಿಲ್ಲಾಧಿಕಾರಿ ಡಾ.ಆನಂದ್‌ ಆದೇಶ ಹೊರಡಿಸಿದ್ದಾರೆ.

ನಿಷೇಧಾಜ್ಞೆ ಅವಧಿಯಲ್ಲಿ ಐದು ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರೆವಣಿಗೆ ಅಥವಾ ಸಭೆ ಸಮಾರಂಭನಡೆಸುವುದನ್ನು ನಿಷೇಧಿಸಿದೆ. ಯಾವುದೇ ಶಸ್ತ್ರಗಳು ಅಥವಾ ದೈಹಿಕ ಹಿಂಸೆ ಉಂಟುಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಿದೆ.

ಪಟಾಕಿಗಳನ್ನು ಸಿಡಿಸುವುದು, ಯಾವುದೇ ಸ್ಪೋಟಕಗಳನ್ನು ಸಾರ್ವಜನಿಕ ಮೆರವಣಿಗೆ, ಪ್ರತಿಭಟನೆ ಜಾಥಾ ಮುಷ್ಕರ, ರಸ್ತೆ ತಡೆ ಸಾರ್ವಜನಿಕ, ರಾಜಕೀಯ ಸಭೆ ಸಮಾರಂಭಗಳನ್ನು ನಡೆಸುವುದನ್ನು ನಿಷೇಧಿಸಿದೆ.

ಈ ನಿಷೇಧಾಜ್ಞೆಯು ಜಾರಿಯಲ್ಲಿರುವ ಪ್ರದೇಶದಲ್ಲಿ ಸರ್ಕಾರದಿಂದ ಅಥವಾ ಸರ್ಕಾರದ ಆದೇಶದಂತೆ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆ ಸಮಾರಂಭಗಳಿಗೆ ಅನ್ವಯವಾಗುವುದಿಲ್ಲ ಮತ್ತು ಪೊಲೀಸ್‌ ಅಧಿಕಾರಿಗಳು, ಬ್ಯಾಂಕ್ ಭದ್ರತಾ ಸಿಬ್ಬಂದಿ ಕರ್ತವ್ಯ ನಿರ್ವಹಣೆ ವೇಳೆ ಲಾಠಿ, ಶಸ್ತ್ರಾಸ್ತ್ರ ಮತ್ತು ಸಂಪರ್ಕ ಉಪಕರಣಗಳನ್ನು ಉಪಯೋಗಿಸುವುದಕ್ಕೆ ಅನ್ವಯವಾಗುವುದಿಲ್ಲ. ಪೂರ್ವ ನಿಯೋಜಿತ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ. ಅಂತ್ಯ ಸಂಸ್ಕಾರಗಳಿಗೆ ಸಂಬಂಧಿಸಿದಂತೆ ಧಾರ್ಮಿಕ ಕಾರ್ಯಗಳಿಗೆ ಸೀಮಿತವಾಗಿ ಅಂತ್ಯಸಂಸ್ಕಾರ ನಡೆಯುವ ಸ್ಥಳಕ್ಕೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Related Articles

Back to top button