ಬಂಟ್ವಾಳ: ವ್ಯಕ್ತಿಗೆ ಹರಿತವಾದ ಆಯುಧದಿಂದ ಇರಿದು ಪರಾರಿ

Views: 173
ಕನ್ನಡ ಕರಾವಳಿ ಸುದ್ದಿ: ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಪೇಟೆಯ ಅಕ್ಕರಂಗಡಿ ಎಂಬಲ್ಲಿ ವ್ಯಕ್ತಿಯೊಬ್ಬರಿಗೆ ಹರಿತವಾದ ಆಯುಧದಿಂದ ಇರಿದು ದುಷ್ಕರ್ಮಿಗಳು ಪರಾರಿಯಾದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಇರಿತಕ್ಕೊಳಗಾದ ಅಕ್ಕರಂಗಡಿ ನಿವಾಸಿ ಹಮೀದ್ (38) ಗಂಭೀರ ಗಾಯಗೊಂಡಿದ್ದಾರೆ.
ಪೈಂಟಿಂಗ್ ಕೆಲಸ ಮಾಡುತ್ತಿದ್ದ ಹಮೀದ್ ಅವರಿಗೆ ಬೈಕ್ ನಲ್ಲಿ ಆಗಮಿಸಿದ ದುಷ್ಕರ್ಮಿಗಳು ಇರಿದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಇರಿತದಿಂದ ಹಮೀದ್ ಅವರ ಕೈಗೆ ಆಳವಾದ ಗಂಭೀರ ಗಾಯವಾಗಿದ್ದು, ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಹಮೀದ್ ಅಲ್ಲಿರುವುದನ್ನು ಗಮನಿಸಿ, ಜನಸಂಚಾರ ವಿರಳವಾದ ಬಳಿಕ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ತಲವಾರು ಅಥವಾ ಚೂರಿಯಂತ ಹರಿತವಾದ ಆಯುಧದಲ್ಲಿ ದಾಳಿ ಮಾಡಿದ್ದಾರೆ.
ನಗರ ಪೊಲೀಸ್ ಠಾಣೆ ಎಸ್.ಐ. ರಾಮಕೃಷ್ಣ ಮತ್ತು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಘಟನೆಗೆ ನಿಖರವಾದ ಕಾರಣ ಏನು ಎಂಬುದು ತಿಳಿದು ಬಂದಿಲ್ಲ.