ಇತರೆ
ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರು ನೀರು ಪಾಲು

Views: 48
ಕನ್ನಡ ಕರಾವಳಿ ಸುದ್ದಿ : ಬಟ್ಟೆ ತೊಳೆಯಲೆಂದು ತೆರಳಿದ್ದ ಇಬ್ಬರು ಬಾಲಕಿಯರು ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಯಾದಗಿರಿಯ ಮೊಟ್ನಳ್ಳಿ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.
ವೈಶಾಲಿ (17) ಮತ್ತು ನವಿತಾ( 16) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಇಬ್ಬರೂ ಬಟ್ಟೆ ಒಗೆಯಲು ತೆರಳಿದ್ದರು. ಈ ವೇಳೆ ಕಾಲು ಜಾರಿ ಬಿದ್ದು ದುರ್ಘಟನೆ ಸಂಭವಿಸಿದ್ದು ಸ್ಥಳದಲ್ಲಿ ರಕ್ಷಿಸಲು ಸಹ ಯಾರೂ ಇರಲಿಲ್ಲ ಎಂದು ಹೇಳಲಾಗಿದೆ.
ಬಳಿಕ ಬೇರೆ ಗ್ರಾಮಸ್ಥರು ಬಾವಿಯ ಬಳಿ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.