ಸಾಂಸ್ಕೃತಿಕ

ಬಡಗುತಿಟ್ಟು ಪರಂಪರೆಯ ಪ್ರಾತಿನಿಧಿಕ ವೇಷಧಾರಿ ಕೊಂಡದಕುಳಿ ರಾಮಚಂದ್ರ ಹೆಗಡೆಗೆ ‘ಶ್ರೀವಿದ್ಯಾಮಾನ್ಯ ಯಕ್ಷಕಲಾ’ ಪ್ರಶಸ್ತಿ

Views: 24

ಉಡುಪಿ, ಪಲಿಮಾರು ಮಠದ ಯತಿಶ್ರೇಷ್ಠ ಶ್ರೀವಿದ್ಯಾಮಾನ್ಯ ತೀರ್ಥ ಶ್ರೀಪಾದರ ಹೆಸರಿನಲ್ಲಿ ಅವರ ಶಿಷ್ಯ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥರು ನೀಡುವ ‘ಶ್ರೀ ವಿದ್ಯಾಮಾನ್ಯ ಯಕ್ಷಕಲಾ ಪುರಸ್ಕಾರ’ಕ್ಕೆ ಬಡಗುತಿಟ್ಟಿನ ಶ್ರೇಷ್ಠ ಕಲಾವಿದರಾದ ಕೊಂಡದಕುಳಿ ರಾಮಚಂದ್ರ ಹೆಗಡೆ ಆಯ್ಕೆಯಾಗಿದ್ದಾರೆ.

ಬಡಗುತಿಟ್ಟು ಪರಂಪರೆಯ ಪ್ರಾತಿನಿಧಿಕ ವೇಷಧಾರಿಯಾಗಿರುವ ಕೊಂಡದಕುಳಿ, ಗುಂಡುಬಾಳ, ಪಂಚಲಿಂಗ, ಸಾಲಿಗ್ರಾಮ ಮೇಳಗಳಲ್ಲಿ ಕಲಾಸೇವೆ ಮಾಡಿದ್ದರು. ಪೂರ್ಣಚಂದ್ರ ಯಕ್ಷಕಲಾ ಪ್ರತಿಷ್ಠಾನವೆಂಬ ಸ್ವಂತ ಮೇಳ ಸ್ಥಾಪಿಸಿ, ಕಾಲಮಿತಿಯ ಪ್ರದರ್ಶನಗಳನ್ನು ನೀಡುತ್ತಾ ಬಂದಿದ್ದಾರೆ.

ನಾಲ್ಕೂವರೆ ದಶಕಗಳ ಕಲಾಜೀವನದಲ್ಲಿ ಹಲವು ಪೌರಾಣಿಕ ಪಾತ್ರಗಳನ್ನು ಅನನ್ಯವಾಗಿ ಚಿತ್ರಿಸಿ, ಯಕ್ಷಗಾನ ಕಲಾಭಿಮಾನಿಗಳ ಪ್ರೀತ್ಯಾದರಕ್ಕೆ ಪಾತ್ರರಾಗಿರುವ ಇವರಿಗೆ ಮುಂದಿನ ಎಪ್ರಿಲ್ 23ರ ಮಂಗಳವಾರ ಬೆಳಗ್ಗೆ 10:30ಕ್ಕೆ ಪಲಿಮಾರಿನಲ್ಲಿ ನಡೆಯುವ ಶ್ರೀ ವಿದ್ಯಾಮಾನ್ಯ ತೀರ್ಥರ ಆರಾಧನಾ ಮಹೋತ್ಸವದ ಸಂದರ್ಭದಲ್ಲಿ ‘ಶ್ರೀವಿದ್ಯಾಮಾನ್ಯ ಯಕ್ಷಕಲಾ ಪುರಸ್ಕಾರ’ವನ್ನು ಪ್ರಶಸ್ತಿ ಫಲಕ ಹಾಗೂ 50,000ರೂ. ನಿಧಿಯೊಂದಿಗೆ ಪ್ರದಾನ ಮಾಡಲಾಗುವುದು ಎಂದು ಪಲಿಮಾರು ಮಠದ ದಿವಾನರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button