ಶಿಕ್ಷಣ
ಬಸ್ರೂರು: ಪ್ರಾಧ್ಯಾಪಕ ಶ್ರೀ ಕುಮಾರ್.ಪಿ ಗೆ”ಕರ್ನಾಟಕ ಯುವ ರತ್ನ” ಪ್ರಶಸ್ತಿ

Views: 250
ಕನ್ನಡ ಕರಾವಳಿ ಸುದ್ದಿ: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿನ ಕನ್ನಡ ವಿಭಾಗದ ಮುಖ್ಯಸ್ಥ ಮತ್ತು ಸಹಾಯಕ ಪ್ರಾಧ್ಯಾಪಕ ಶ್ರೀ ಕುಮಾರ್ ಪಿ ಇವರಿಗೆ ಬೆಂಗಳೂರಿನ ಕರ್ನಾಟಕ ಪ್ರೆಸ್ ಕ್ಲಬ್ ನೀಡುವ ಕರ್ನಾಟಕ ಯುವ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ.
ಇವರು ಶಿಕಾರಿಪುರ ತಾಲ್ಲೂಕಿನ ಜಕ್ಕನ ಹಳ್ಳಿಯವರಾಗಿದ್ದು ಶಿಕಾರಿಪುರ ಮತ್ತು ಶಿರಾಳಕೊಪ್ಪ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದು, ಶಿಕ್ಷಣ ಕ್ಷೇತ್ರದಲ್ಲಿನ ಇವರ ಸೇವೆ ಮತ್ತು ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.