ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಸಂಭ್ರಮದ 76 ನೇ ಗಣರಾಜ್ಯೋತ್ಸವ ಆಚರಣೆ

Views: 177
ಕನ್ನಡ ಕರಾವಳಿ ಸುದ್ದಿ: ದೇಶದ ಪ್ರಮುಖ ರಾಷ್ಟ್ರೀಯ ಹಬ್ಬಗಳಲ್ಲಿ ಒಂದಾದ ಗಣರಾಜ್ಯೋತ್ಸವವನ್ನು ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆ ಬಸ್ರೂರು ಇಲ್ಲಿ ವಿಜೃಂಭಣೆಯಿಂದ ನಡೆಸಲಾಯಿತು.
ಬ್ರಹ್ಮಶ್ರೀ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀಯುತ ಸಂತೋಷ್ ಶೆಟ್ಟಿ ಅವರು ಧ್ವಜಾರೋಹಣವನ್ನು ನೆರವೇರಿಸಿದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು “ಸಂವಿಧಾನದ ಮೌಲ್ಯಗಳನ್ನು ಪಾಲಿಸುವ ಮೂಲಕ ಸಮೃದ್ಧ ದೇಶಕ್ಕಾಗಿ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳನ್ನು ಬೆಳೆಸಬೇಕು. ಮಕ್ಕಳು ಉತ್ತಮ ಗುಣಗಳನ್ನು ಬೆಳೆಸಿಕೊಂಡು ಮಾದರಿಯಾಗಬೇಕು” ಎಂದು ಹೇಳಿದರು.
ಪ್ರಾಂಶುಪಾಲರಾದ ಶ್ರೀಮತಿ ಮಮತಾ ಪೂಜಾರಿಯವರು ಮಾತನಾಡಿ “ಮೂಲಭೂತ ಹಕ್ಕು ಹಾಗೂ ಕರ್ತವ್ಯಗಳ ಬಗ್ಗೆ ಮಕ್ಕಳಲ್ಲಿ ಅರಿವನ್ನು ಮೂಡಿಸಿ ಮುಂದುವರೆಯುತ್ತಿರುವ ಭಾರತ ದೇಶದಲ್ಲಿ ವಿದ್ಯಾರ್ಥಿಗಳ ಅಭೂತಪೂರ್ವ ಕೊಡುಗೆಯಿಂದ ಭಾರತದ ಭವ್ಯ ಭವಿಷ್ಯಕ್ಕೆ ಸಾಧ್ಯವಾಗುತ್ತದೆ” ಎಂದರು.
ಕಾರ್ಯಕ್ರಮದಲ್ಲಿ ಆಡಳಿತ ಅಧಿಕಾರಿಯದ ಶ್ರೀಮತಿ ಆಶಾ ಸಂತೋಷ ಶೆಟ್ಟಿ, ಶಿಕ್ಷಕ ವೃಂದದವರು, ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.