ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆ: ವಾರ್ಷಿಕ ಕ್ರೀಡಾಕೂಟ
"ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು, ಸ್ಪರ್ಧೆಯಲ್ಲಿ ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯ"

Views: 108
ಕನ್ನಡ ಕರಾವಳಿ ಸುದ್ದಿ: ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆ ಇಲ್ಲಿನ ಶಾಲಾ ವಾರ್ಷಿಕ ಕ್ರೀಡಾಕೂಟವು ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿನ ಕ್ರೀಡಾಂಗಣದಲ್ಲಿ ನಡೆಯಿತು.
ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಕ್ರೀಡಾ ಜ್ಯೋತಿಯನ್ನು ತರುವುದರ ಮೂಲಕವಾಗಿ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆಯನ್ನು ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ಸಂತೋಷ ಶೆಟ್ಟಿ ಅವರು ವಹಿಸಿದ್ದರು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ ಶ್ರೀ ಶಾರದ ಕಾಲೇಜಿನ ಪ್ರಾಂಶುಪಾಲರಾದ ಡಾ.ಚಂದ್ರಾವತಿ .ಎ.ಶೆಟ್ಟಿ ಅವರು ಮಾತನಾಡಿ, ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು ಹಾಗೂ ಸ್ಪರ್ಧೆಯಲ್ಲಿ ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯ ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸುವ ಮಾತುಗಳನ್ನಾಡಿದರು
ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ನಿರ್ದೇಶಕರಾದ ಪ್ರಕಾಶ್ ಶೆಟ್ಟಿ, ಪ್ರಾಂಶುಪಾಲರಾದ ಮಮತಾ ಪೂಜಾರಿ, ಶಾಲಾ ಆಡಳಿತ ಅಧಿಕಾರಿ ಶ್ರೀಮತಿ ಆಶಾ ಶೆಟ್ಟಿಯವರು ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ಮಮತಾ ಪೂಜಾರಿ ಸ್ವಾಗತಿಸಿ, ಸಹ ಶಿಕ್ಷಕಿ ಪ್ರಿಯಾ ಕಾರ್ಯಕ್ರಮ ನಿರೂಪಿಸಿದರು ಹಾಗೂ ಶಿಕ್ಷಕಿ ನೂತನ ಅವರು ವಂದಿಸಿದರು.