ಶಿಕ್ಷಣ
ಬಸ್ರೂರು ಶ್ರೀ ಶಾರದಾ ಕಾಲೇಜು: ಪದವಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಉದ್ದೇಶಿತ ಕೈಗಾರಿಕಾ ಭೇಟಿ

Views: 127
ಕನ್ನಡ ಕರಾವಳಿ ಸುದ್ದಿ: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿನ ಪದವಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಉದ್ದೇಶಿತ ಕೈಗಾರಿಕಾ ಭೇಟಿ ಕಾರ್ಯಕ್ರಮ ಜನತಾ ಪೀಶ್ ಇಂಡಸ್ಟ್ರಿ ಕೋಟ ಇಲ್ಲಿಗೆ ಆಯೋಜಿಸಲಾಯಿತು.
ಕಾಲೇಜಿನ ಬಿಕಾಂ ಪದವಿ ವಿದ್ಯಾರ್ಥಿಗಳು ಕೈಗಾರಿಕಾ ಭೇಟಿ ಸಮಯದಲ್ಲಿ ಜನತಾ ಪೀಶ್ ಇಂಡಸ್ಟ್ರಿಯ ಕಾರ್ಯನಿರ್ವಹಣೆ, ತಂತ್ರಜ್ಞಾನ, ಮಾನವ ಸಂಪನ್ಮೂಲ ನಿರ್ವಹಣೆ, ಮತ್ತು ವ್ಯವಹಾರ ಮುಂತಾದ ಅನೇಕ ವಿಷಯಗಳ ಬಗ್ಗೆ ಸಂಸ್ಥೆಯ ಸಿಬ್ಬಂದಿಗಳಿಂದ ಮಾಹಿತಿ ಪಡೆದುಕೊಂಡರು.
ಕಾಲೇಜೀನ ಪ್ರಾಂಶುಪಾಲರಾದ ಡಾ ಚಂದ್ರಾವತಿ ಶೆಟ್ಟಿಯವರ ಮಾರ್ಗದರ್ಶನದಂತೆ ಕಾರ್ಯಕ್ರಮವನ್ನು ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗ ಆಯೋಜಿಸಿದ್ದು, ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ.ರವಿಚಂದ್ರ. ಉಪನ್ಯಾಸಕರಾದ ಶ್ರೀ ಸಂದೀಪ್ ಕೆ, ಶ್ರೀ ದೀಪಕ್ ಕುಮಾರ್ ಶೆಟ್ಟಿ ಮತ್ತು ಉಪನ್ಯಾಸಕಿ ಸುಹನಾ ಉಪಸ್ಥಿತರಿದ್ದರು.