ಶಿಕ್ಷಣ
ಬಸ್ರೂರು ಶ್ರೀ ಶಾರದಾ ಕಾಲೇಜು: ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

Views: 171
ಕನ್ನಡ ಕರಾವಳಿ ಸುದ್ದಿ: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ ಕಾರ್ಯಕ್ರಮ ಕಾಲೇಜಿನ ಶ್ರೀ ವೀರರಾಜೇಂದ್ರ ಹೆಗ್ಡೆ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಹಾಗೂ ಉದ್ಘಾಟಕರಾಗಿ ಶ್ರೀಮತಿ ಅನುಪಮಾ ಎಸ್ ಶೆಟ್ಟಿ ಟ್ರಸ್ಟಿ, ಶ್ರೀ ಶಾರದಾ ಕಾಲೇಜು ಬಸ್ರೂರು ಇವರು ಆಗಮಿಸಿ ಶಿಕ್ಷಣ ಮತ್ತು ಮೌಲ್ಯಗಳು ಯಶಸ್ವಿನ ದಾರಿ ಎನ್ನುವ ವಿಷಯದ ಕುರಿತು ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು. ಐಕ್ಯುಎಸಿ ಸಂಚಾಲಕರಾದ ಶ್ರೀ ಸಂದೀಪ್ ಕೆ ಹಾಗೂ ವಿದ್ಯಾರ್ಥಿ ಕ್ಷೇಮ ಪಾಲನ ಅಧಿಕಾರಿ ಶ್ರೀ ಸೂರಜ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಕನ್ನಡ ಉಪನ್ಯಾಸಕಿ ಶ್ರೀಮತಿ ಪ್ರಮೀಳಾ ನಿರ್ವಹಿಸಿದರು. ಗಣಕವಿಜ್ಞಾನ ವಿಭಾಗದ ಮುಖ್ಯಸ್ಥೆ ಮಾನವಿ ವಂದಿಸಿದರು.






