ಶಿಕ್ಷಣ

ಬಸ್ರೂರು ಶ್ರೀ ಶಾರದಾ ಕಾಲೇಜು: “ನಶಾ ಮುಕ್ತ ಭಾರತ ಅಭಿಯಾನ” ಸಾಮೂಹಿಕ ಪ್ರತಿಜ್ಞಾವಿಧಿ ಸ್ವೀಕಾರ

Views: 81

ಕನ್ನಡ ಕರಾವಳಿ ಸುದ್ದಿ: ಶ್ರೀ ಶಾರದಾ ಪದವಿ ಮತ್ತು ಶ್ರೀ ಶಾರದಾ ಪದವಿ ಪೂರ್ವ ಕಾಲೇಜು, ಬಸ್ರೂರು ಇಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ಮಾದಕ ವಸ್ತು ವಿರೋಧಿ ಸಮಿತಿಯ ಆಶ್ರಯದಲ್ಲಿ ಸಾಮೂಹಿಕ ಪ್ರತಿಜ್ಞಾ ವಿಧಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಚಂದ್ರಾವತಿ ಶೆಟ್ಟಿ ಮಾತನಾಡಿ ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆಯಿಂದ ದೂರವಿದ್ದು ನಮ್ಮ ಜಿಲ್ಲೆ, ರಾಜ್ಯ ಹಾಗೂ ದೇಶ ನಶಾ ಮುಕ್ತ ಆಗುವಲ್ಲಿ ಯುವ ಜನತೆ ಪಣ ತೊಡಬೇಕು ಎಂದು ಹೇಳಿದರು.ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಶ್ರೀ ನಾರಾಯಣ ಪೈ ಉಪಸ್ಥಿತರಿದ್ದರು.

ಮಾದಕ ದ್ರವ್ಯ ವಿರೋಧಿ ಸಮಿತಿಯ ಸಂಚಾಲಕರು ಮತ್ತು ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ. ರವಿಚಂದ್ರ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು. 

 

Related Articles

Back to top button
error: Content is protected !!