ಬಸ್ರೂರು ಶ್ರೀ ಶಾರದಾ ಕಾಲೇಜು ಬೋಧಕರ ಅಭಿವೃದ್ಧಿ ಕಾರ್ಯಕ್ರಮ

Views: 80
ಕನ್ನಡ ಕರಾವಳಿ ಸುದ್ದಿ: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿನ ಪದವಿ ಮತ್ತು ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಿಗೆ ಒಂದು ದಿನದ ಶೈಕ್ಷಣಿಕ ಅಭಿವೃದ್ಧಿ ಕಾರ್ಯಕ್ರಮ ಕಾಲೇಜಿನ ಶೀ ವೀರ ರಾಜೇಂದ್ರ ಹೆಗ್ಡೆ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ ಕೆ ರಾಧಾಕೃಷ್ಣ ಶೆಟ್ಟಿ ಉದ್ಘಾಟಿಸಿ ಉಪನ್ಯಾಸಕರಿಗೆ ಶೈಕ್ಷಣಿಕ ಅಭಿವೃದ್ಧಿ, ತರಬೇತಿ , ಸಂಶೋಧನೆ, ತಂತ್ರ ಜ್ಞಾನದ ಬಳಕೆ ಬಗ್ಗೆ ಮಾಹಿತಿ ಅತಿ ಅಗತ್ಯವಾಗಿದೆ ಎಂದರು. ಉಪನ್ಯಾಸಕರು ಶೈಕ್ಷಣಿಕವಾಗಿ ಸಮರ್ಥರಾದಾಗ ಮಾತ್ರ ಉತ್ತಮ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡಲು ಸಾಧ್ಯ ಆ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ನಡೆಯಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಬೆಂಗಳೂರಿನ ಜೈನ್ ಪರಿಗಣಿತ ವಿಶ್ವ ವಿದ್ಯಾಲಯದ ಪ್ರಾಧ್ಯಾಪಕರಾದ ಅನಿಲಾ ಬಾಜಪೇಯಿ ಭಾಗವಹಿಸಿ ಉಪನ್ಯಾಸಕರಿಗೆ ತರಬೇತಿ ನೀಡಿದರು. ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಶ್ರೀ ನಾರಾಯಣ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗ ಮುಖ್ಯಸ್ಥರಾದ ಡಾ ರವಿಚಂದ್ರ ಕಾರ್ಯಕ್ರಮ ಸಂಯೋಜಿಸಿದರು.
ಐಕ್ಯೂಎಸಿ ಸಂಯೋಜಕರಾದ ಶ್ರೀ ಸಂದೀಪ್ ಕೆ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾಪಿಸಿದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕರಾದ ಶ್ರೀ ದೀಪಕ್ ಕುಮಾರ್ ಶೆಟ್ಟಿ ವಂದಿಸಿದರು. ಇಂಗ್ಲಿಷ್ ವಿಭಾಗದ ಉಪನ್ಯಾಸಕಿ ಶ್ರೀಮತಿ ಅನ್ನಪೂರ್ಣ ಕಾರ್ಯಕ್ರಮ ನಿರೂಪಿಸಿದರು.