ಶಿಕ್ಷಣ

ಬಸ್ರೂರು ಶ್ರೀ ಶಾರದಾ ಕಾಲೇಜು: ಕ್ಯಾಂಪಸ್ ನೇಮಕಾತಿ

Views: 127

ಕನ್ನಡ ಕರಾವಳಿ ಸುದ್ದಿ: ಬಸ್ರೂರು ಶ್ರೀ ಶಾರದಾ ಕಾಲೇಜು ಇಲ್ಲಿನ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಟಾಟಾ ಎಲೆಕ್ಟ್ರಾನಿಕ್ ಸಿಸ್ಟಮ್ಸ್ ಸಲ್ಲೂಸನ್ ಕಂಪನಿಗೆ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆ ನೆಡೆಯಿತು.

ಕಾರ್ಯಕ್ರಮದಲ್ಲಿ ಕ್ರಿಯೆಟಿವ್ ಇಂಜಿನಿಯರಿಂಗ್ ಸಂಸ್ಥೆಯ ನೇಮಕಾತಿ ಅಧಿಕಾರಿಗಳಾದ ಶ್ರೀ ಮಹೇಶ್ ಬೀರಾದರ್ , ಶ್ರೀ ಹಾಲೇಶ್ ಹೀರೆಮಠ ಮತ್ತು ಅವರ ತಂಡ ಭಾಗವಹಿಸಿ ಉದ್ಯೋಗದ ಬಗ್ಗೆ ಮಾಹಿತಿ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಚಂದ್ರಾವತಿ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿ ನೇಮಕಾತಿ ಅಧಿಕಾರಿಯಾದ ಡಾ. ವಿಶ್ವನಾಥ್ ಆಚಾರ್ಯ ಕಾರ್ಯಕ್ರಮವನ್ನು ಸಂಯೋಜಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ರವಿಚಂದ್ರ, ಐಕ್ಯೂಏಸಿ ಸಂಯೋಜಕರಾದ ಶ್ರೀ ಸಂದೀಪ್ ಕೆ ಉಪಸ್ಥಿತರಿದ್ದರು. ಕಾಲೇಜಿನ ಉದ್ಯೋಗ ತರಬೇತಿ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಶ್ರೀ ಹರೀಶ್ ಕಾಂಚನ್ ಕಾರ್ಯಕ್ರಮ ನಿರೂಪಿಸಿದರು. ಈ ನೇಮಕಾತಿ ಪ್ರಕ್ರಿಯೆಯಲ್ಲಿ ಅಂತಿಮ ಪದವಿಯ 20 ವಿದ್ಯಾರ್ಥಿಗಳು ನೇಮಕಾತಿ ಆದೇಶ ಪಡೆದಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button