ಶಿಕ್ಷಣ
ಬಸ್ರೂರು ಶ್ರೀ ಶಾರದಾ ಪದವಿ ಪೂರ್ವ ಕಾಲೇಜು: ವಿವಿಧ ಸಂಘಗಳ ಉದ್ಘಾಟನೆ

Views: 49
ಕನ್ನಡ ಕರಾವಳಿ ಸುದ್ದಿ: ಬಸ್ರೂರು ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಇದರ ವಿವಿಧ ಸಂಘಗಳನ್ನು ಬಸ್ರೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಸುಜಾತ ತಂತ್ರಿಯವರು ಉದ್ಘಾಟಿಸಿದರು.
ನಂತರ ಅವರು ಮಾತನಾಡಿ, ವಿವಿಧ ಸಂಘಗಳು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕ ಮತ್ತು ವಿದ್ಯಾರ್ಥಿಗಳು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನಾರಾಯಣ ಪೈ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವಿವಿಧ ಸಂಘಗಳ ಸಂಯೋಜಕರಾದ ಶಿಲ್ಪಾ,ಸುಹಾನ,ಸರಸ್ವತಿ,ಆಶಾ ಉಪಸ್ಥಿತರಿದ್ದರು. ಎನ್.ಎಸ್.ಎಸ್ ಅಧಿಕಾರಿ ಅಕ್ಷಯ ಹೆಗ್ಡೆ ಮೊಳಹಳ್ಳಿ ವಿವಿಧ ಸಂಘಗಳ ಕುರಿತು ಮಾತುಗಳನ್ನಾಡಿದರು.