ಆರೋಗ್ಯ

ಬಸ್ರೂರು ಶ್ರೀ ಶಾರದಾ ಪದವಿ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Views: 325

ಕನ್ನಡ ಕರಾವಳಿ ಸುದ್ದಿ: ಬಸ್ರೂರು ಶ್ರೀ ಶಾರದಾ ಪದವಿ ಮತ್ತು ಪದವಿ ಪೂರ್ವ ಕಾಲೇಜು ಇಲ್ಲಿನ ಎನ್.ಎಸ್.ಎಸ್ ಮತ್ತು ಎನ್.ಸಿ.ಸಿ ಜಂಟಿ ಸಂಯೋಜನೆಯಲ್ಲಿ 11ನೇ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನಾರಾಯಣ ಪೈ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಯೋಗ ನಮ್ಮ ಬದುಕಿನ ಅವಿಭಾಜ್ಯ ಅಂಗ, ನಮ್ಮ ಜೀವನ ಶೈಲಿಯನ್ನು ಉತ್ತಮಗೊಳಿಸಲು ಮಾನಸಿಕ ದೈಹಿಕ ಆರೋಗ್ಯ ಕಾಪಾಡಲು ಯೋಗ ಸಹಕಾರಿ, ಜೀವನದ ಸವಾಲುಗಳನ್ನು ಶಾಂತಚಿತ್ತದಿಂದ  ಎದುರಿಸಬಹುದು ಎಂದರು. 

ಕಾರ್ಯಕ್ರಮವನ್ನು ಯೋಗ ಗುರುಗಳಾದ ಹೂವಿನಹಳ್ಳಿ ಸಾತಪ್ಪ ಉದ್ಘಾಟಿಸಿ, ಪ್ರಾತ್ಯಕ್ಷಿಕೆ ಯನ್ನು ನಡೆಸಿಕೊಟ್ಟರು.

ವೇದಿಕೆಯಲ್ಲಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಚಂದ್ರಾವತಿ ಶೆಟ್ಟಿ, ಎನ್‌.ಸಿ.ಸಿ ಅಧಿಕಾರಿ ಸಂದೀಪ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಯೋಗ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ವಿವಿಧ ಸ್ಪರ್ಧೆಗಳ ವಿಜೇತರನ್ನು ಅಭಿನಂದಿಸಲಾಯಿತು.

ಎನ್.ಎಸ್.ಎಸ್ ಅಧಿಕಾರಿ ಅಕ್ಷಯ ಹೆಗ್ಡೆ ಮೊಳಹಳ್ಳಿ ನಿರೂಪಿಸಿ, ವಂದಿಸಿದರು.

 

Related Articles

Back to top button