ಇತರೆ
ಬಸ್ ಡಿಕ್ಕಿಯಾಗಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವು

Views: 165
ಕನ್ನಡ ಕರಾವಳಿ ಸುದ್ದಿ: ಹೊಸ ವರ್ಷದ ಮುನ್ನಾ ದಿನವೇ ಭೀಕರ ಅಪಘಾತ ಸಂಭವಿಸಿದ್ದು, ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಶರಾವತಿ ಸೇತುವೆಯ ಮೇಲೆ ನಡೆದಿದೆ.
ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗೌರೀಶ್ ನಾಯ್ಕ್ (25), ರಮೇಶ್ ನಾಯ್ಕ್ (22) ಹಾಗೂ ರಾಘವೇಂದ್ರ ಸೋಮಯ್ಯ (34) ಮೃತ ದುರ್ದೈವಿಗಳು.
ಕೆಎಸ್‌ಆರ್‌ಟಿಸಿ ಬಸ್ ವಿಜಯಪುರದಿಂದ ಮಂಗಳೂರಿಗೆ ಹೋಗುತ್ತಿದ್ದು, ಶರಾವತಿ ಸೇತುವೆ ಮೇಲೆ ಆಗಮಿಸುತ್ತಿದ್ದ ವೇಳೆ ಡಿಕ್ಕಿ ಹೊಡೆದು ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಘಟನಾ ಸ್ಥಳಕ್ಕೆ ಹೊನ್ನಾವರ ಪಿಎಸ್ಐ ಮಂಜುನಾಥ ಗೌಡ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.