ರಾಜಕೀಯ

ಬಾಗಲಕೋಟೆಯಲ್ಲಿ ಬಿಜೆಪಿ ಸಭೆ: ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

Views: 0

ಬಾಗಲಕೋಟೆಯಲ್ಲಿ ಬಿಜೆಪಿ ಪಕ್ಷದ ಜಿಲ್ಲಾಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆಯಿತು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಗಲಾಟೆಯಿಂದಾಗಿ ಕೆಲವು ಸಮಯ ಗೊಂದಲಮಯ ವಾತಾವರಣ ನಿರ್ಮಾಣವಾಗಿದೆ.

ಬಿಜೆಪಿ ಸೋಲಿಗೆ ಎರಡು ಗುಂಪುಗಳ ನಡುವೆ ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಂಡವು ಇದರಿಂದ ಗದ್ದಲದ ವಾತಾವರಣ ಸೃಷ್ಟಿಯಾಯಿತು.

ರಾಜು ರೇವಣಕರ್ ಮಾತನಾಡಿ, ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದವರು ಈ ಸಭೆಯಿಂದ ಹೊರಗೆ ನಡೆಯಿರಿ ಎಂದು ಘೋಷಣೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಗೋವಿಂದ ಕಾರಜೋಳ ಅವರು ಸಮಾಧಾನಪಡಿಸಿದರೂ ಕಾರ್ಯಕರ್ತರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಯತ್ನಾಳ್ ಬೆಂಬಲಿಗರ ಅಬ್ಬರದಿಂದ ಬೇಸತ್ತು ರಮೇಶ್ ಜಿಗಜಿಣಗಿ, ಮುರುಗೇಶ್ ನಿರಾಣಿ, ಎ. ಎಸ್ ಪಾಟೀಲ್ ಮುಂತಾದವರು ಸಭೆಯಿಂದ ಹೊರ ನಡೆದರು

ರಮೇಶ್ ಜಿಗಜಿಣಗಿ ಅವರನ್ನು ನಾಲ್ಕನೇ ಬಾರಿಗೆ ಸಂಸದರಾಗಿ ಗೆಲ್ಲಿಸಬೇಕಾಗಿದೆ ಎಂದು ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿಕೆ ನೀಡುತ್ತಿದ್ದಂತೆ ಯತ್ನಾಳ್ ಬೆಂಬಲಿಗರು ಜಿಗಜಿಣಗಿ ವಿರುದ್ಧ ಘೋಷಣೆ ಕೂಗಿ ಎರಡು ಗುಂಪುಗಳ ಮಧ್ಯೆ ವಾಗ್ವಾದ ನಡೆಯಿತು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮಾತನಾಡಿ, ಎಲ್ಲರೂ ಒಗ್ಗಟ್ಟಾಗಿ ಲೋಕಸಭಾ ಚುನಾವಣೆ ಗೆಲ್ಲುವುದಕ್ಕಾಗಿ ಗೊಂದಲಗಳನ್ನು ಸರಿಪಡಿಸಿ ಪಕ್ಷ ಸಂಘಟನೆ ಮಾಡುತ್ತೇವೆ ಎಂದರು.

Related Articles

Back to top button