ಜನಮನ

ಬಾಡಿಗೆ ಮನೆಯಲ್ಲಿ ಹೊರ ರಾಜ್ಯದ ಯುವತಿಯರನ್ನು ಇಟ್ಟುಕೊಂಡು ಹೈಟೆಕ್ ವೇಶ್ಯಾವಟಿಕೆ!

Views: 292

ಕನ್ನಡ ಕರಾವಳಿ ಸುದ್ದಿ: ಬೆಂಗಳೂರಿನ ವಿವಿಧೆಡೆ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. 9 ಮಹಿಳೆಯರ ರಕ್ಷಣೆ ಮಾಡಲಾಗಿದೆ.

ಬಿಇಎಲ್ ಬಡಾವಣೆಯಲ್ಲಿ ಹೈಫೈ ಮನೆ ಬಾಡಿಗೆ ಪಡೆದಿದ್ದ ಆರೋಪಿಗಳು, ಹೊರ ರಾಜ್ಯದಿಂದ ಕೆಲಸಕ್ಕೆ ಬರುವ ಯುವತಿಯರನ್ನೇ ಗುರಿಯಾಗಿಸಿಕೊಂಡಿದ್ದರು. ಅವರಿಗೆ ಕೆಲಸದ ಆಸೆ ತೋರಿಸಿ ವೇಶ್ಯಾವಾಟಿಕೆ ದಂಧೆಗೆ ದೂಡುತ್ತಿದ್ದರು ಎಂಬುದು ತಿಳಿದುಬಂದಿದೆ.

ಮನೆ ಮಾಲೀಕರ ಬಳಿ ಮಹಿಳೆಗೆ ಪತಿ ಇಲ್ಲ ಎಂದು ಹೇಳಿ ಬಾಡಿಗೆಗೆ ಪಡೆಯುತ್ತಿದ್ದರು. ನಂತರ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಗಿರಾಕಿಗಳನ್ನು ಫೋನ್ ಮೂಲಕ ಸಂಪರ್ಕಿಸುತ್ತಿದ್ದ ಆರೋಪಿಗಳು, ಅವರನ್ನು ಮನೆಗೆ ಕರೆಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ವಿದೇಶಿ ಮತ್ತು ಹೊರ ರಾಜ್ಯದ ಯುವತಿಯರನ್ನು ಇಟ್ಟುಕೊಂಡು ಆರೋಪಿಗಳು ದಂಧೆ ನಡೆಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಸಿಸಿಬಿ ಮಹಿಳಾ ಸಂರಕ್ಷಣಾ ಘಟಕದಿಂದ ದಾಳಿ ನಡೆಸಲಾಯಿತು. ಇಬ್ಬರು ಮಹಿಳೆಯರನ್ನೂ ಬಂಧಿಸಲಾಗಿದೆ. ಸದ್ಯ ಬ್ಯಾಡರಹಳ್ಳಿ ಠಾಣೆಯ ಪೊಲೀಸರಿಂದ ತನಿಖೆ ಮುಂದುವರಿದಿದೆ.

ಬೆಂಗಳೂರಿನ ಅನೇಕ ಭಾಗಗಳಲ್ಲಿ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ದಾಳಿ ನಡೆಸಲಾಗಿದೆ. ಸಂಪಿಗೆಹಳ್ಳಿ, ಕೆಆರ್ ಪುರಂ, ರಾಮಮೂರ್ತಿನಗರ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಲಾಗಿದ್ದು ಹೋಟೆಲ್, ಅಪಾರ್ಟ್ಮೆಂಟ್, ಮನೆಗಳಲ್ಲಿ ದಂಧೆ ನಡೆಸುತ್ತಿದ್ದವರ ಬಂಧಿಸಲಾಗಿದೆ.

 

.

Related Articles

Back to top button