ಕನ್ನಡ ಕರಾವಳಿ ಸುದ್ದಿ: ಕರಾವಳಿ ಪದ್ಮಶಾಲಿಗರ ಮೂಲ ಕ್ಷೇತ್ರ ಬಾರಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಷ್ಟಬಂಧ – ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಅಂಗವಾಗಿ ಪೂರ್ವಬಾವಿಯಾಗಿ ಚಪ್ಪರ ಮಹೂರ್ತ ಫೆ.9ರಂದು ರವಿವಾರ ಚಾಲನೆಗೊಳಿಸಲಾಯಿತು.
ದೇವಳದ ಅರ್ಚಕ ಸುರೇಶ್ ಉಪಾಧ್ಯಾಯ ಧಾರ್ಮಿಕ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘ ಮತ್ತು ಪದ್ಮಶಾಲಿ ನೇಕಾರ ಪ್ರತಿಷ್ಠಾನ ಅಧ್ಯಕ್ಷ ಶ್ರೀ ರತ್ನಾಕರ ಇಂದ್ರಾಳಿ ಮಾತನಾಡಿ, ಬ್ರಹ್ಮಕಲಕೋತ್ಸವ ಕಾರ್ಯಕ್ರಮದ ಪೂರ್ವಭಾವಿ ಚಪ್ಪರ ಮುಹೂರ್ತ ಆಧಾರ ಸ್ತಂಭ.ಈ ಮೂಲಕ ಪದ್ಮಶಾಲಿ ಬಾಂಧವರಲ್ಲಿ ಅನ್ಯೋನ್ಯತೆಯಿಂದ ಒಗ್ಗಟ್ಟು ಪ್ರದರ್ಶಿಸುವುದರ ಮೂಲಕ ಮಾದರಿ ಕಾರ್ಯಕ್ರಮವಾಗಿ ಮೂಡಿಬರಲಿ ಎಂದರು.
ಬಾರಕೂರು ರಂಗನಕೇರಿ ಶೆಟ್ಟಿಗಾರ್ ಇಂಡಸ್ಟ್ರೀಸ್ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಉಮೇಶ್ ಆಚಾರ್ಯ ಬಾರ್ಕೂರು ಮಾತನಾಡಿ, ದೇವಸ್ಥಾನದಲ್ಲಿ ನಡೆಯಲಿರುವ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಿ ನೆರವೇರಲಿ ಎಂದು ಶುಭ ಹಾರೈಸಿದರು.
ಅಭಿವೃದ್ಧಿ ಸಮಿತಿ ಅಧ್ಯಕ್ಷ ಬಿ. ಶ್ರೀನಿವಾಸ ಶೆಟ್ಟಿಗಾರ್ ರಂಗನಕೇರಿ ದೇವಳದಲ್ಲಿ ನಡೆಯಲಿರುವ ಎಲ್ಲರ ಸಹಕಾರ ಕೋರಿದರು. ದೇವಳದ ಆಡಳಿತ ಮೊಕ್ತೇಸರರಾದ ಡಾ. ಜಯರಾಮ ಶೆಟ್ಟಿಗಾರ್ ಮಾತನಾಡಿ, ಫೆಬ್ರವರಿ 14 ರಿಂದ 20 ರ ತನಕ ಶ್ರೀ ಕ್ಷೇತ್ರದಲ್ಲಿ ನಡೆಯಲಿರುವ ಅಷ್ಟ ಬಂಧ- ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕು ಎಂದರು.
ಸಂಘಟನಾ ಸಮಿತಿಯ ಗೌರವಾಧ್ಯಕ್ಷ ಪುರುಷೋತ್ತಮ್.ಸಿ ಕಾರ್ಯಕ್ರಮ ಸಂಘಟಿಸಿದ್ದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹೆಚ್.ಎ. ಗೋಪಾಲ ವಂದಿಸಿದರು. ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯದರ್ಶಿ ಡಾ. ಶಿವಪ್ರಸಾದ್.ಕೆ ಕಾರ್ಯಕ್ರಮ ನಿರ್ವಹಿಸಿದರು.
ಆಡಳಿತ ಮಂಡಳಿ ಸರ್ವ ಸಮಿತಿಗಳ ಪದಾಧಿಕಾರಿಗಳು ಮತ್ತು ಸದಸ್ಯರು,ಮಾಗಣೆಯ ಮುಖ್ಯಸ್ಥರು ಮತ್ತು ಸರ್ವ ಭಕ್ತ ವೃಂದದವರು ಉಪಸ್ಥಿತರಿದ್ದರು.