ಕರಾವಳಿ

ಬಾರ್ಕೂರು:ಮೀನಿಗೆ ಬಲೆ ಹಾಕುವಾಗ ನೀರಿನ ಸೆಳೆತಕ್ಕೆ ಸಿಲುಕಿ ಇಬ್ಬರು ಯುವಕರು ನೀರು ಪಾಲು

Views: 164

ಬ್ರಹ್ಮಾವರ : ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೊಸಾಳ ಗ್ರಾಮದ ಸೀತಾ ನದಿಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರಿನ ಸೆಳೆತಕ್ಕೆ ಸಿಕ್ಕಿ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ಮುಂಜಾನೆ ನಡೆದಿದೆ.

ಮೃತ ಯುವಕರು ಹೊಸಾಳ ಗ್ರಾಮದ ಶ್ರೀಶ (21) ಹಾಗೂ ಪ್ರಶಾಂತ್ ಪೂಜಾರಿ (30) ಎಂದು ಗುರುತಿಸಲಾಗಿದೆ.

ಇವರು ಇಂದು ಬೆಳಿಗ್ಗೆ ಮೀನು ಹಿಡಿಯಲೆಂದು ನಾಗರಮಠದ ಸೀತಾ ನದಿಗೆ ಹೋಗಿದ್ದು ಮೀನಿಗೆ ಬಲೆ ಹಾಕುವಾಗ ನೀರಿನ ಸೆಳೆತಕ್ಕೆ ಸಿಲುಕಿ ಇಬ್ಬರು ಯುವಕರು ನೀರು ಪಾಲಾಗಿರುತ್ತಾರೆ.

ಯುವಕರು ನೀರಿನಲ್ಲಿ ಮುಳುಗುತ್ತಿರುವುದನ್ನು ಸ್ಥಳೀಯರೊಬ್ಬರು ನೋಡಿ ಅವರ ರಕ್ಷಣೆಗೆ ಧಾವಿಸಿದ್ದರೂ ನೀರಿನ ಸೆಳೆತ ಜೋರಾಗಿದ್ದರಿಂದ ಯುವಕರು ನೀರು ಪಾಲಾದರು ಎಂದು ಹೇಳಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ,  ಆಪತ್ಭಾಂಧವ  ಈಜು ತಜ್ಞ ಈಶ್ವರ್ ಮಲ್ಪೆ ಹಾಗೂ ಸ್ಥಳೀಯರು ಬಂದು ಕಾರ್ಯಾಚರಣೆ ನಡೆಸಿದ್ದಾರೆ. ಶ್ರೀಶ ಹಾಗೂ ಪ್ರಶಾಂತ್ ಪೂಜಾರಿಯ ಶವ ಹೊಳೆಯಲ್ಲಿ ದೊರೆತಿದ್ದು ಸ್ಥಳೀಯರಾದ  ಜೀವನ್ ಮಿತ್ರ ನಾಗರಾಜ್ ಪುತ್ರನ್ ಅವರು ಮೃತದೇಹವನ್ನು ಬ್ರಹ್ಮಾವರ ಶವಾಗಾರಕ್ಕೆ ಸಾಗಿಸಿರುತ್ತಾರೆ.

ಸ್ಥಳಕ್ಕೆ ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ ಹಾಗೂ ಬ್ರಹ್ಮಾವರ ಠಾಣಾಧಿಕಾರಿ ಮಧು ಬಿಇ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Articles

Back to top button