ಸಾಂಸ್ಕೃತಿಕ
ಬಾರ್ಕೂರು:ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

Views: 107
ಕನ್ನಡ ಕರಾವಳಿ ಸುದ್ದಿ: ಬಾರ್ಕೂರು ಶ್ರೀ ಬ್ರಹ್ಮಲಿಂಗವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಳದ ಅಷ್ಟ- ಬಂಧ ಬ್ರಹ್ಮಕಲಕೋತ್ಸವ ಅಂಗವಾಗಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರು ಗಣೇಶ್ ಬಿ ಕಾಂಚನ್ ಉದ್ಘಾಟಿಸಿ ಶುಭಹಾರೈಸಿದರು,
ದೇಗುಲದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಬಾರ್ಕೂರು ರಂಗನಕೇರಿ ಶ್ರೀನಿವಾಸ್ ಶೆಟ್ಟಿಗಾರ್ ಅಧ್ಯಕ್ಷತೆ ವಹಿಸಿ ಅತಿಥಿಗಳನ್ನು ಸ್ವಾಗತಿಸಿದರು.
ವೇದಿಕೆಯಲ್ಲಿ ಉದ್ಯಮಿಗಳಾದ ಮನೋರಂಜನ್ ವಿಟ್ಲ, ಬ್ರಹ್ಮಕಲಕೋತ್ಸವ ಸಮಿತಿಯ ಅಧ್ಯಕ್ಷರಾದ ಎಚ್.ಎ ಗೋಪಾಲ್, ಸಂಘಟನಾ ಸಮಿತಿಯ ಗೌರವಾಧ್ಯಕ್ಷ ಪುರುಷೋತ್ತಮ ಮಣಿಪಾಲ್ ಉಪಸ್ಥಿತರಿದ್ದರು.
ಕಾರ್ಯದರ್ಶಿ ಭಾಸ್ಕರ್ ಶೆಟ್ಟಿಗಾರ ಕಾರ್ಯಕ್ರಮ ನಿರೂಪಿಸಿದರು. ಸುಧಾಕರ್ ವಕ್ವಾಡಿ ವಂದಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಶಿಕ್ಷಕ ನಾರಾಯಣ ಶೆಟ್ಟಿಗಾರ ನಿರ್ವಹಿಸಿದರು. ಸಭಾ ಕಾರ್ಯಕ್ರಮದ ನಂತರ ವಿವಿಧ ಮನೋರಂಜನಾ ಕಾರ್ಯಕ್ರಮಗಳು ನಡೆಯಿತು.