ಬಿಎಂಟಿಸಿ ಬಸ್ ಸ್ಕೂಟರ್ ಗೆ ಡಿಕ್ಕಿ ಹೊಡೆದು ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು

Views: 42
ಬೆಂಗಳೂರು, ರಾಜಾಜಿನಗರದ ಹರಿಶ್ಚಂದ್ರ ಘಾಟ್ ಬಳಿ ಇಂದು ಬೆಳಿಗ್ಗೆ ಬಿಎಂಟಿಸಿ ಬಸ್ ಸ್ಕೂಟರ್ ಗೆ ಡಿಕ್ಕಿ ಹೊಡೆದು ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದಾರೆ.
ಕೆಂಗೇರಿಯ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಮಲ್ಲೇಶ್ವರಂನ ಕುಸುಮಿತಾ (21) ಮೃತಪಟ್ಟವರು .
ಎಂದಿನಂತೆ ಕಾಲೇಜಿಗೆ ಹೋಗಲು ಮಲ್ಲೇಶ್ವರಂನಿಂದ ಹರಿಶ್ಚಂದ್ರಘಾಟ್‌ಗೆ ಸ್ಕೂಟರ್ ನಲ್ಲಿ ಬೆಳಗ್ಗೆ 8.30ಕ್ಕೆ ಬರುತ್ತಿದ್ದ ಯುವತಿ,ಬಳಿಕ ಮೆಟ್ರೋ ಬಳಸಿ ಕಾಲೇಜಿಗೆ ತೆರಳುತಿದ್ದಳು.
ಈ ವೇಳೆ ಅದೇ ಮಾರ್ಗದಲ್ಲಿ ಬಂದ ಬಸ್ ಆಕೆ ತೆರಳುತ್ತಿದ್ದ ಬೈಕ್‌ಗೆ ಡಿಕ್ಕಿಹೊಡೆದಿದೆ. ಬಳಿಕ ಬೈಕ್ ಸಮೇತ ಎಳೆದೊಯ್ದಿದೆ.ಬಳಿಕ ಗಾಯಾಗೊಂಡಿದ್ದ ಆಕೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು.
ಆದರೆ, ಚಿಕಿತ್ಸೆ ಫಲಿಸದೇ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ,ಮೃತದೇಹವನ್ನು ಕೆಸಿ ಜನರಲ್ ಆಸ್ಪತ್ರೆಯಲ್ಲಿರಿಸಲಾಗಿದ್ದು ಪ್ರಕರಣ ದಾಖಲಿಸಿರುವ ಮಲ್ಲೇಶ್ವರಂ ಸಂಚಾರ ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ ಎಂದು ಡಿಸಿಪಿ ಸಿರಿಗೌರಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಅಪಘಾತಗಳು ಕಳೆದ ಕೆಲವು ತಿಂಗಳುಗಳಲ್ಲಿ ಹೆಚ್ಚಾಗಿದೆ. 2023 ರ ಅಕ್ಟೋಬರ್ ತಿಂಗಳೊಂದರಲ್ಲೇ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಮೂವರು ಮೃತಪಟ್ಟ ಪ್ರತ್ಯೇಕ ಘಟನೆಗಳು ವರದಿಯಾಗಿದ್ದವು. ಡಿಸೆಂಬರ್ 28ರಂದು ಬಿಎಂಟಿಸಿ ಬಸ್‌ಗೆ ಡಿಕ್ಕಿಯಾಗಿ ಪಾದಚಾರಿ ಮಹಿಳೆ ಸಾವನ್ನಪ್ಪಿದ್ದರು. ಅದಾದ ನಂತರ ಜನವರಿ 6ರಂದು ಬಿಎಂಟಿಸಿ ವೋಲ್ವೋ ಬಸ್ ಹರಿದು ಬೈಕ್ ಸವಾರ ಮೃತಪಟ್ಟಿದ್ದರು.