ರಾಜಕೀಯ

ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಮೋರ್ಚಾ ಉಪಾಧ್ಯಕ್ಷರಾಗಿ ಐರೋಡಿ ವಿಠ್ಠಲ್ ಪೂಜಾರಿ ಆಯ್ಕೆ

Views: 265

ಕೋಟ: ಕರ್ನಾಟಕ ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಉಡುಪಿ ಜಿಲ್ಲೆಯ ಸಾಸ್ತಾನದ ಐರೋಡಿ ವಿಠ್ಠಲ್ ಪೂಜಾರಿ ಆಯ್ಕೆಯಾಗಿದ್ದಾರೆ.

ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷರಾದ ರಘು ಕೌಟಿಲ್ಯಾ ಘೋಷಿಸಿದ್ದಾರೆ.

ಪ್ರಾರಂಭ ಕಾಲಘಟ್ಟದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿ,ವಿಶ್ವಹಿಂದೂ ಪರಿಷತ್,ಭಜರಂಗದಳ ಸೇರಿದಂತೆ ಹಿಂದೂ ಸಂಘಟನೆ,ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿಯ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಣೆ, ಸಮುದಾಯದ ಸಂಘಟನೆಗಳ ಪ್ರಮುಖರಾಗಿ,ಸ್ಥಳೀಯ ವಿವಿಧ ದೇವಳಗಳ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ಇವರು ಕಳೆದ 32 ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಬಿಜೆಪಿ ಸ್ಥಳೀಯ ಮಟ್ಟದ ಸ್ಥಾನೀಯ ಸಮಿತಿಯ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ, ಐರೋಡಿ ಗ್ರಾಮಪಂಚಾಯತ್ ಸದಸ್ಯರಾಗಿ, ಅಧ್ಯಕ್ಷರಾಗಿ,ಕುಂದಾಪುರ ಬಿಜೆಪಿ ಮಂಡಲ ಸಮಿತಿಯ ಉಪಾಧ್ಯಕ್ಷರಾಗಿ,ಉಡುಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ,ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ಬಿಜೆಪಿಗೆ ಬಲ ತುಂಬಿದ್ದಾರೆ.

Related Articles

Back to top button