ಬಿಜೆಪಿ: ಬಾಕಿ ಉಳಿದ 5 ಕ್ಷೇತ್ರದ ಸಂಭಾವ್ಯ ಅಭ್ಯರ್ಥಿಗಳು ಯಾರು?

Views: 101
20 ಕ್ಷೇತ್ರಗಳ ಅಭ್ಯರ್ಥಿಗಳನ್ನು ಫೈನಲ್ ಮಾಡಿರುವ ಬಿಜೆಪಿ, ಐದು ಕ್ಷೇತ್ರಗಳಲ್ಲಿ ಟಿಕೆಟ್‌ಗೆ ಬಾರಿ ಪೈಪೋಟಿ ಏರ್ಪಟ್ಟಿತ್ತು. ಹೀಗಾಗಿ ಬಿಜೆಪಿ ಹೈಕಮಾಂಡ್ ನಾಯಕರು ಸರ್ವೆ ವರದಿ ಸಹಿತ ರಾಜ್ಯ ನಾಯಕರಿಂದ ಪ್ರತ್ಯೇಕ ವರದಿಯನ್ನು ತರಿಸಿಕೊಂಡು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.
ಈ ಬಾರಿ ಜೆಡಿಎಸ್ ಜತೆಗೆ ಮೈತ್ರಿ ಇರುವುದರಿಂದ 3 ಸೀಟನ್ನು ಆ ಪಕ್ಷಕ್ಕೆ ಬಿಟ್ಟುಕೊಟ್ಟಿದೆ. ಹೀಗಾಗಿ ಬಾಕಿ 5 ಕ್ಷೇತ್ರಕ್ಕೆ ತನ್ನ ಅಭ್ಯರ್ಥಿಯನ್ನು ಪ್ರಕಟಿಸಬೇಕಿದ್ದು, ಇಂದು ಸಂಜೆಯೊಳಗೆ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆ ಎಂದು ತಿಳಿದುಬಂದಿದೆ.
ಈ ಐದು ಕ್ಷೇತ್ರಗಳಲ್ಲಿ ಟಿಕೆಟ್‌ಗೆ ಬಾರಿ ಪೈಪೋಟಿ ಏರ್ಪಟ್ಟಿತ್ತು. ಹೀಗಾಗಿ ಬಿಜೆಪಿ ಹೈಕಮಾಂಡ್ ನಾಯಕರು ಸರ್ವೆ ವರದಿ ಸಹಿತ ರಾಜ್ಯ ನಾಯಕರಿಂದ ಪ್ರತ್ಯೇಕ ವರದಿಯನ್ನು ತರಿಸಿಕೊಂಡು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.
ಉತ್ತರ ಕನ್ನಡ
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಅವರಿಗೆ ಟಿಕೆಟ್ ಕೊಡದೆ ಇರುವುದು ಬಹುತೇಕ ಖಚಿತವಾಗಿದೆ. ಹೀಗಾಗಿ ಪ್ರಬಲ ಅಭ್ಯರ್ಥಿಗಾಗಿ ಹುಡುಕಾಟ ನಡೆದಿತ್ತು. ಇಲ್ಲೀಗ ಬಿಜೆಪಿ ವಕ್ತಾರರಾಗಿರುವ ಹರಿಪ್ರಕಾಶ್ ಕೋಣೆಮನೆ ಅಥವಾ ಮಾಜಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಲ್ಲಿ ಒಬ್ಬರಿಗೆ ಟಿಕೆಟ್ ಕೊಡುವುದು ಖಚಿತವಾಗಿದೆ.ಕೊನೆ ಕ್ಷಣದಲ್ಲಿ ಚಕ್ರವರ್ತಿ ಸೂಲಿಬೆಲೆ ಹೆಸರು ಸೇರ್ಪಡೆಯಾಗಿದೆ.
ಚಿಕ್ಕಬಳ್ಳಾಪುರ
ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ. ಕೆ. ಸುಧಾಕರ್ ಮತ್ತು ಅಲೋಕ್ ವಿಶ್ವನಾಥ್ ನಡುವೆ ಪೈಪೋಟಿ ಏರ್ಪಟ್ಟಿದೆ. ಇಲ್ಲಿ ಒಬ್ಬರಿಗೆ ಕೊಟ್ಟರೆ ಮತ್ತೊಂದು ಬಣದಿಂದ ಆಕ್ಷೇಪ ವ್ಯಕ್ತವಾಗುವ ಸಾಧ್ಯತೆ ಇದೆ. ಹೀಗಾಗಿ ಟಿಕೆಟ್ ಹಂಚಿಕೆಗೂ ಮೊದಲೇ ಸಮಸ್ಯೆ ಬಗೆಹರಿಸಲು ಪ್ಲ್ಯಾನ್ ಮಾಡಿಕೊಳ್ಳಲಾಗಿತ್ತು.
ಚಿತ್ರದುರ್ಗ
ಕೇಂದ್ರ ಸಚಿವ ನಾರಾಯಣ ಸ್ವಾಮಿ ಮತ್ತು ಜನಾರ್ದನ ಸ್ವಾಮಿ ಚಿತ್ರದುರ್ಗ ಕ್ಷೇತ್ರದಲ್ಲಿ ಪೈಪೋಟಿ ಏರ್ಪಟ್ಟಿದೆ.
ರಾಯಚೂರು
ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ರಾಜ ಅಮರೇಶ್ವರ ನಾಯಕ ಮತ್ತು ಬಿ.ವಿ ನಾಯಕ ನಡುವೆ ಟಿಕೆಟ್‌ಗೆ ಸ್ಪರ್ಧೆ ಮುಂದುವರಿದಿದೆ.
ಬೆಳಗಾವಿಯಲ್ಲಿ ಶೆಟ್ಟರ್‌ಗೆ ಫಿಕ್ಸ್?
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದೆ ಮಂಗಳಾ ಅಂಗಡಿ ಇದ್ದಾರೆ. ಆದರೆ, ಅವರಿಗೆ ಈ ಬಾರಿ ಟಿಕೆಟ್ ಮಿಸ್ ಆಗುತ್ತದೆ ಎಂಬುದು ಖಚಿತವಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿ ಮಾಡಿದ್ದರು. ತಮ್ಮ ಕುಟುಂಬದ ಶ್ರದ್ಧಾ ಶೆಟ್ಟರ್‌ಗೆ ಕೊಡಿ ಎಂದು ಕೇಳಿದ್ದರು. ಆದರೆ, ಹೈಕಮಾಂಡ್ ಈಗ ಘರ್ ವಾಪ್ಸಿ ಆಗಿರುವ ಜಗದೀಶ್ ಶೆಟ್ಟರ್ ಅವರ ಮೇಲೆ ವಿಶ್ವಾಸ ಇಟ್ಟಿದೆ ಎನ್ನಲಾಗಿದೆ. ಹೀಗಾಗಿ ಅವರಿಗೆ ಟಿಕೆಟ್ ಎಂದು ಈಗಾಗಲೇ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸಹ ಹೇಳಿದ್ದಾರೆ. ಹೀಗಾಗಿ ಅವರಿಗೇ ಟಿಕೆಟ್ ಪಕ್ಕಾ ಎನ್ನಲಾಗಿದೆ. ಇನ್ನು ಮಹಾಂತೇಶ್ ಕವಟಗಿಮಠ, ಈರಣ್ಣ ಕಡಾಡಿ ಸಹ ರೇಸ್‌ನಲ್ಲಿದ್ದಾರೆ. ಕವಟಗಿಮಠ ನಿಷ್ಠಾವಂತರ ಕೋಟಾದಡಿ ಟಿಕೆಟ್ ಕೇಳಿದರೆ, ಕಡಾಡಿ ಪಂಚಮಸಾಲಿ ಕೋಟಾದಡಿ ಟಿಕೆಟ್ ಕೇಳುತ್ತಿದ್ದಾರೆ.