ಜನಮನ

ಬಿಲ್ ಪಾಸ್ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟ ಮೆಸ್ಕಾಂ ಜೆಇ ರೆಡ್ ಹ್ಯಾಂಡ್ ಲೋಕಾಯುಕ್ತ ಬಲೆಗೆ 

Views: 124

ಕನ್ನಡ ಕರಾವಳಿ ಸುದ್ದಿ: ಲಂಚದ ಹಣ ಪಡೆಯುತ್ತಿದ್ದಾಗಲೇ ಮೆಸ್ಕಾಂ ಜೆಇ ಓರ್ವರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಜಿಲ್ಲಾ ಜೆಇ ಪ್ರಶಾಂತ್ ಲೋಕಾಯುಕ್ತ ಬಲೆಗೆ ಬಿದ್ದವರು.

ವಿದ್ಯುತ್ ಗುತ್ತಿಗೆದಾರ ದೇವರಾಜ್ ಅವರಿಗೆ ಗಂಗಾ ಕಲ್ಯಾಣ ಯೋಜನೆಯ ಬಿಲ್ ಪಾಸ್ ಮಾಡಲು ಪ್ರಶಾಂತ್ 9,000 ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು.ಮೆಸ್ಕಾಂ ಕಚೇರಿಯಲ್ಲಿಯೇ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಜೆಇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಚಿಕ್ಕಮಗಳೂರು ಲೋಕಾಯುಕ್ತ ಎಸ್ ಪಿ ಸ್ನೇಹಾ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಜೆಇ ಪ್ರಶಾಂತ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

 

Related Articles

Back to top button